ಮಹಲಿಂಗಪುರ

ಕೆಸರಗೊಪ್ಪ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕೆಸರಗೊಪ್ಪ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಮಹಾಲಿಂಗಪುರ 03: ಬಾಗಲಕೋಟ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟಗಳಲ್ಲಿ ಮಹಾಲಿಂಗಪುರ ಸಮೀಪದ ಕೆಸರಗೋಪ ಸರ್ಕಾರಿ ಪ್ರೌಢಶಾಲೆಯ ಮೂರು ವಿದ್ಯಾರ್ಥಿಗಳಾದ ಮಾನಿಂಗ ಚವ್ಹಾಣ ಐದು ಕಿಲೋಮೀಟರ್ ನಡಿಗೆಯಲ್ಲಿ ಪ್ರಥಮ ಸ್ಥಾನ. ಧರೆಪ್ಪ ಬ್ಯಾಕೋಡ ಹ್ಯಾಮರ್ ಥ್ರೋ ದಲ್ಲಿ ದ್ವಿತೀಯ ಸ್ಥಾನ ಮತ್ತು ಶ್ವೇತಾ ಬ್ಯಾಕೋಡ್ 400 ಮೀಟರ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಈ ವಿದ್ಯಾರ್ಥಿಗಳಿಗೆ ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಎಸ್ ಬಿ  ಮುಕಾರ್ತಿಹಾಳ್ ಇವರಿಗೆ ಶಾಲೆಯ ಮುಖ್ಯೋಪಾಧ್ಯಯರು ಶಿಕ್ಷಕ ವೃಂದದವರು, ಎಸ್‌ಡಿಎಂಸಿ ಅಧ್ಯಕ್ಷರು,  ಸದಸ್ಯರು, ಕೆಸರಗೊಪ್ಪ ಗ್ರಾಮದ ಗುರು ಹಿರಿಯರು ಮತ್ತು ಕ್ರೀಡಾಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 


ಸುದ್ದಿ ಓದಿ