ಮಹಲಿಂಗಪುರ

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾಲಿಂಗಪುರ, 28 : ಸ್ಥಳೀಯ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ಲೋಕಾಪೂರದ ಆರ್‌.ಬಿ.ಜಿ ಕಾಲೇಜಿನಲ್ಲಿ ನಡೆದ ಮುಧೋಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.  

ವಾಲಿಬಾಲ್ ಮತ್ತು ಥ್ರೋಬಾಲ್‌ನಲ್ಲಿ ಪ್ರಥಮ, ಹ್ಯಾಂಡ್‌ಬಾಲ್ ಮತ್ತು ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟದಲ್ಲಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಶೆಟಲ್ ಬ್ಯಾಡ್ಮಿಂಟನ್ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟವನ್ನು ಪ್ರತಿನಿಧಿಸುತ್ತಿದೆ. ದೈಹಿಕ ನಿರ್ದೇಶಕ ಬಿ.ಎಂ.ಸಿದ್ನಾಳ ಮಾರ್ಗದರ್ಶನ ನೀಡಿದ್ದರು. ಆರ್‌.ಎಸ್‌.ಕಲ್ಲೋಳಿ ವ್ಯವಸ್ಥಾಪಕರಾಗಿದ್ದರು ಎಂದು ಪ್ರಾಚಾರ್ಯ ಎಲ್‌.ಬಿ.ತುಪ್ಪದ ತಿಳಿಸಿದ್ದಾರೆ. 


ಸುದ್ದಿ ಓದಿ