ರಾಣೆಬೆನ್ನೂರ

ಶಿವಗಂಗಾ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಶಿವಗಂಗಾ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ  ಆಯ್ಕೆ

ರಾಣೆಬೆನ್ನೂರ: ಹಾವೇರಿಯಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದ ಬಾಲಕಿಯರ ವಿಭಾಗದ ಶಟಲ್ ಕಾಕ್ ಗುಂಪು ಸ್ಪರ್ಧೆಯಲ್ಲಿ ಸ್ಥಳೀಯ ಶಿವಗಂಗಾ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಾದ ಹರ್ಷಿತಾ ಮತ್ತು ಶ್ರಾವಣಿ ಅವರುಗಳು ಪ್ರಥಮ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಮಹೇಶ್ವರಗೌಡ ಪಾಟೀಲ, ಆಡಳಿತಾಧಿಕಾರಿ ಚೈತ್ರಾ ಪಾಟೀಲ, ದೈಹಿಕ ಶಿಕ್ಷಕ ಚಂದ್ರಶೇಖರ ಲಮಾಣಿ  ತಿಳಿಸಿದ್ದಾರೆ. 


ಸುದ್ದಿ ಓದಿ