ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಬಳ್ಳಾರಿ 22: ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನವನ್ನು ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳ ಮೆರವಣಿಗೆ ಸಂಗಮ್ ಸರ್ಕಲ್, ರಾಯಲ್ ಸರ್ಕಲ್ ಮುಖಂತರ ಜಿಲ್ಲಾ ಕಛೆರಿಗೆ ಸೇರಿ ಪ್ರತಿಭಟನೆ ಮಾಡಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷ ಗುರಳ್ಳಿ ರಾಜ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರ ಈ ಶೈಕ್ಷಣಿಕ ವμರ್Àದಲ್ಲಿ ಹಾಸ್ಟೆಲ್ ಹಾಗೂ ವಿದ್ಯಾರ್ಥಿವೇತನಗಳಿಗೆ ಅರ್ಜಿ ಆಹ್ವಾನಿಸದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದ ಹಲವು ಕಡೆ ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಸ್ ಸಮಸ್ಯೆ ಎದುರಿಸುತ್ತಿದ್ದಾರೆ.
ಬಸ್ ಪಾಸ್ ಸಂಬಂಧಿತ ಗೊಂದಲ ನಿವಾರಿಸುವುದು ಅತ್ಯವಶ್ಯಕವಾಗಿದೆ. ಅವಶ್ಯಕ ಬೋಧಕರಿಲ್ಲದೇ ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಪದವಿ ಪರೀಕ್ಷೆಗಳು ಕೂಡ ನಿಗದಿಯಾಗಿವೆ. ಇದು ವಿದ್ಯಾರ್ಥಿಗಳ ಆಕ್ರೋಶವನ್ನು ಹೆಚ್ಚಿಸಿದೆ. ಸರ್ಕಾರವು ಈ ಕೂಡಲೇ ವಿದ್ಯಾರ್ಥಿಗಳ ಧ್ವನಿಗೆ ಓಗೊಟ್ಟು ಈ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸೆಕ್ರೇಟಿರಿಯಟ್ ಸದಸ್ಯರಾದ ಕೆ.ಈರಣ್ಣ ಹಾಗೂ ಸದಸ್ಯರು ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.