ಧಾರವಾಡ - ಹುಬ್ಬಳ್ಳಿ

ವಿದ್ಯಾರ್ಥಿಗಳು ಆತ್ಮ ವಿಶ್ವಾಸದೊಂದಿಗೆ ದೈಹಿಕ ಆರೋಗ್ಯ ವಿಕಸನಗೋಳಿಸಿಕೊಳ್ಳಬೇಕು: ಡಾ. ಸುರೇಶ ಡಿ. ಹೊರಕೇರಿ

ವಿದ್ಯಾರ್ಥಿಗಳು ಆತ್ಮ ವಿಶ್ವಾಸದೊಂದಿಗೆ ದೈಹಿಕ ಆರೋಗ್ಯ ವಿಕಸನಗೋಳಿಸಿಕೊಳ್ಳಬೇಕು: ಡಾ. ಸುರೇಶ ಡಿ. ಹೊರಕೇರಿ

ಹುಬ್ಬಳ್ಳಿ 29: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸ್ವಚ್ಚ, ಸಮೃದ್ಧ ನಾಡು ಕಟ್ಟುವ ಕೆಲಸಕ್ಕೆ ಕೈಜೊಡಿಸಬೇಕು ಎಂದು ಕೆ.ಎಲ್‌.ಇ ಟೆಕ್ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಹೇಳಿದರು. 

ಅವರು ಜೆ.ಎಸ್‌.ಎಸ್‌. ಸಕ್ರಿ ಕಾನೂನು ಮಹಾವಿದ್ಯಾಲಯವು ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನಾ ಘಟಕ, ವಾರ್ಷಿಕ ವಿಶೇಷ ಶಿಬಿರ 2023-24 ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮಾನಸಿಕ ಹಾಗೂ ದೈಹಿಕ ಆರೋಗ್ಯದೊಂದಿಗೆ ವ್ಯಕ್ತಿತ್ವ ವಿಕಸನಗೋಳಿಸುವುದೇ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಗಳ ಮೂಲ ಉದ್ಧೇಶವಾಗಿದೆ. ಪರಿಸರ ಪ್ರಜ್ಞೆ, ನಾಗರಿಕ ಪ್ರಜ್ಞೆ, ಸ್ವಚ್ಛತೆ, ಶಿಕ್ಷಣ, ಆರೋಗ್ಯ, ರಾಷ್ಟ್ರೀಯ ಏಕತೆ, ವಿಭಿನ್ನ ಸಂಸ್ಕೃತಿಯ ಪರಿಚಯ, ಎಲ್ಲರನ್ನು ಪ್ರೀತಿ, ಗೌರವದಿಂದ ಕಾಣುವುದು, ಮುಂತಾದ ವಿಷಯಗಳ ಕುರಿತು ಅರಿವು ಮೂಡಿಸುವುದು, ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪ್ರಜ್ಞೆಯನ್ನು ಕಲಿಸಿಕೊಡುತ್ತದೆ. ಸೇವಾ ಮನೋಭಾವ ರೂಡಿಸಿಕೊಳ್ಳಬೇಕು.  ಮೊಬೈಲ್‌ಗಳನ್ನು ಎಷ್ಟು ಬೇಕೋ ಅಷ್ಟು ಬಳಕೆ ಮಾಡಬೇಕು.  ವಿದ್ಯಾರ್ಥಿಗಳಿಗೆ ಗ್ರಾಮದ ಬದುಕನ್ನು ಪರಿಚಯಿಸುವುದು. ಅವರ ಸಂಸ್ಕೃತಿ, ಶ್ರಮದ ಮಹತ್ವ, ಆಚಾರ, ವಿಚಾರಗಳನ್ನು ತಿಳಿಸುವುದು. ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನ ಗೊಳ್ಳುವುದು. ಶಿಬಿರಗಳನ್ನು ಗ್ರಾಮಗಳಲ್ಲಿ ಆಯೋಜಿಸುವುದರಿಂದ ಗ್ರಾಮದ ಜನರ ಬದುಕನ್ನು ಸುಧಾರಿಸುವುದು. ಗ್ರಂಥಾಲಯಗಳ ಮಹತ್ವ ತಿಳಿಸಿದರು. ವಿದ್ಯಾರ್ಥಿಗಳು ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.  

ಸಾಹಿತಿ, ನಿವೃತ್ ಪ್ರಾಚಾರ್ಯ ಪ್ರೊ ಶಂಕರಗೌಡ್ರ ಸಾತ್ಮಾರ ಅವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್). ಶಿಬಿರಗಳು ಮನಸ್ಸುಗಳನ್ನು ಪರಿವರ್ತಿಸುತ್ತವೆ. ನಿಸ್ವಾರ್ಥ ಸೇವೆ ಸಲ್ಲಿಸಬೇಕು. ಸಮಾಜಕ್ಕೆ ಯಾವುದೇ ಅಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಪ್ರಕೃತಿಯೊಂದಿಗೆ ಬೆರೆಯಬೇಕು. ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಹಾಗೂ ಸುತ್ತಮೂತ್ತ ಆಗುವ ಬದಲಾವಣೆಗಳನ್ನು ತಿಳಿದುಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದರು. 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟನ ಜ್ಞಾನವಿಕಾಸ ಸಮನ್ವಯ ಅಧಿಕಾರಿ ವಿಜಯಲಕ್ಷ್ಮೀ ಅವರು ಮಾತನಾಡಿ ಗ್ರಾಮಾಭಿವೃದ್ದಿ ಯೋಜನೆಯು ಗ್ರಾಮಗಳ ಅಭಿವೃದ್ದಿಗೆ ತುಂಬಾ ಸಹಕಾರಿಯಾಗಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ದಿಗೆ ಕಾರಣವಾಗಿದೆ. ಮಹಿಳೆಯರ ಆರ್ಥಿಕ ಪ್ರಗತಿಗೆ ಸಹಾಯವನ್ನು ಒದಗಿಸುತ್ತಿದೆ. ವಾತ್ಸಲ್, ಜನಮಂಗಳ ಯೋಜನೆಗಳು ಜನರಿಗೆ ತುಂಬಾ ಅನುಕೂಲವಾಗಿವೆ. ಶೌರ್ಯ ವಿಪತ್ತು ತಂಡ ತುರ್ತು ಪರಿಸ್ಥಿತಿಯಲ್ಲಿ ಉತ್ತಮ ಕಾರ್ಯಮಾಡುತ್ತಿದೆ ಎಂದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಮಹತ್ವ ಹಾಗೂ ಕಾರ್ಯಚಟುವಟಿಕೆಗಳನ್ನು ವಿವರವಾಗಿ ತಿಳಿಸಿಕೊಟ್ಟರು. 

ಅಧ್ಯಕ್ಷತೆ ವಹಿಸಿದ್ದ ಜೆ.ಎಸ್‌.ಎಸ್‌. ಸಕ್ರಿ ಕಾನೂನು ಮಹಾವಿದ್ಯಾಲಯ ಪ್ರಾಧ್ಯಾಪಕಿ ಪ್ರೊ ಶೋಭಾ ಜಾಬಿನ್ ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣಿಗೆಗಾಗಿ ಆಯೋಜಿಸುವ ಇಂತಹ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು. ಮಕ್ಕಳು ಉತ್ತಮ ಆರೋಗ್ಯವನ್ನು ಹೊಂದಲು ಉತ್ತಮ ಆಹಾರ ಸೇವನೆ, ಹೆಚ್ಚು ನೀರು ಕುಡಿಯಬೇಕು. ಪರಮ ಪೂಜ್ಯ ಶ್ರೀ ಡಿ. ವಿರೇಂದ್ರ ಹೆಗ್ಗಡೆ ಅವರು ಮಾಡುವ ಸತ್ಕಾರ್ಯಗಳನ್ನು ಸ್ಮರಿಸಿದರು. ಅವರ ಸಂಸ್ಥೆಯಲ್ಲಿ ಓದುವ, ಕೆಲಸ ಮಾಡುವ ನಾವೆಲ್ಲರೂ ಪುಣ್ಯವಂತರು ಎಂದರು. ಹಲವಾರು ಉತ್ತಮ ಸಮಾಜಮುಖಿ ಕಾರ್ಯಮಾಡುತ್ತಿರುವ ಕ್ರೀಯಾಶೀಲ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ತುಂಬಾ ಸಂತೋಷವಾಗಿದೆ. ಅವರ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.  

ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ  ಸುರೇಶ ಎಂ. ಲಿಂಬಿಕಾಯಿ, ಪ್ರೊ ಬಾಬುಲಾಲ್ ಆರ್‌. ದರಗದ, ಪ್ರೊ ಶ್ರೀಶೈಲಾ ಮುಧೋಳ, ಪ್ರೊ ದೀಪಾ ಎಂ. ಪಾಟೀಲ, ಶೇಖರಗೌಡ, ಮಂಜುಳಾ, ಗ್ರಾಮದ ಹಿರಿಯರು, ಶಿಕ್ಷಕರು, ವಿದ್ಯಾರ್ಥಿಗಳು, ಮುಂತಾದವರು ಭಾಗವಹಿಸಿದ್ದರು. ಗೌರಮ್ಮ ಹೊಸಮನಿ ಪ್ರಾಥಿಸಿದರು. ವಿನಾಯಕ ಬಾದರಿ ಸ್ವಾಗತಿಸಿದರು. ರಾಘವೇಂದ್ರ ಕಲಾಲ, ನಿರೂಪಿಸಿದರು. ನಿವೇದಿತಾ ಹೆಳವರ ವಂದಿಸಿದರು. 


ಸುದ್ದಿ ಓದಿ