ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು: ವಿರೇಶ ಪಾಟೀಲ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು: ವಿರೇಶ ಪಾಟೀಲ Students should engage in sports and cultural activities alongside their academics: Viresha Patil

ಲೋಕದರ್ಶನ ವರದಿ 

 ಮಾಂಜರಿ  10: ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಕೆಎಲ್‌ಇ ಸಂಸ್ಥೆಯ ಶ್ರೀಮತಿ ಶಾರದಾ ಕೋರೆ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು.  

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಚಿಂತಕರಾದ ಶ್ರೇಷ್ಠ ವಾಗ್ಮಿ ಶ್ರೀ ವಿರೇಶ ಪಾಟೀಲ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಆಡಳಿತ ಮಂಡಳಿ ಸಲಹಾ ಸಮಿತಿ ಅಧ್ಯಕ್ಷರಾದ ಸುರೇಶ್ ಪಾಟೀಲ ವಹಿಸಿದ್ದರು.  

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿರೇಶ ಪಾಟೀಲ, ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ದೊಡ್ಡ ಕನಸುಗಳನ್ನು ಹೊಂದಬೇಕು ಹಾಗೂ ಅವುಗಳನ್ನು ಸಾಧಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಭಾರತದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಶಾಲಾ ವೇದಿಕೆಯ ಮೂಲಕ ತಮ್ಮ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಿ ಸಾಧನೆ ಮಾಡಬೇಕು. ತಂದೆ-ತಾಯಿಗಳನ್ನು ಗೌರವಿಸುವುದರ ಜೊತೆಗೆ ತಮಗೆ ಶಿಕ್ಷಣ ನೀಡಿದ ಶಾಲೆಯ ಬಗ್ಗೆ ಹೆಮ್ಮೆ ಹೊಂದಬೇಕು ಎಂದು ಸಲಹೆ ನೀಡಿದರು.  

ಸ್ಥಳೀಯ ಆಡಳಿತ ಮಂಡಳಿ ಸದಸ್ಯರಾದ ಸುರೇಶ್ ಎಸ್‌. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ಸೀಮಿತರಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರನ್ನು ಎಸ್‌ಎಸ್‌ಕೆ ಪ್ರೌಢಶಾಲೆಯ ಉಪಪ್ರಾಚಾರ್ಯರಾದ ಶ್ರೀಮತಿ ಜೆ.ಎಸ್‌. ತಮಗೋಂಡ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.  

ಸ್ಥಳೀಯ ಆಡಳಿತ ಮಂಡಳಿ ಸದಸ್ಯರಾದ ಡಾ. ಆರಿ​‍್ಡ. ಗಿಜರೆ ಉಪಸ್ಥಿತರಿದ್ದರು. ಅತಿಥಿಗಳನ್ನು ವಿ.ಡಿ. ನಾಯಿಕ ಪರಿಚಯಿಸಿದರು. ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಮನ್ವಿ ಮಳಣವರ ಭರತನಾಟ್ಯ ಪ್ರದರ್ಶಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು.  

ಕಾರ್ಯಕ್ರಮದಲ್ಲಿ ಅಂಕಲಿಯ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು, ಶಾಲೆಯ ಶಿಕ್ಷಕರಾದ ಸಿ.ಬಿ. ಚೌಗಲಾ, ಎ.ಡಿ. ಜಾಧವ, ಎಂ.ಆರ್‌. ನಾಗರಾಜ, ಎಸ್‌.ಬಿ. ಕುಂಬಾರ, ಬಿ.ಎಸ್‌. ಅಂಬಿ, ಎ.ಎಸ್‌. ಶಿರಗಾಂವೆ ಸೇರಿದಂತೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು. ಡಾ. ಎಸ್‌. ಬಾಕಳೆ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಎ.ಎಸ್‌. ಮಾನೆ ವಂದಿಸಿದರು.