ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬಾರದು: ಕುನ್ನೂರ
ಶಿಗ್ಗಾವಿ : ಕಣ್ಣಿಗೆ ಕಾಣದ ದುಷ್ಟ ಶಕ್ತಿಗಳು ವಿದ್ಯಾರ್ಥಿಗಳ ಮನದಲ್ಲಿ ವಿಷಬೀಜ ಬಿತ್ತಿ ಕರ್ನಾಟಕದಲ್ಲಿ ಮತೀಯ ಗಲಬೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಇಂಥ ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬಾರದು ಎಂದು ಶ್ರೀ ಚನ್ನಬಸವೇಶ್ವರ ಗ್ರಾಮೀಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜು ಎಂ ಕುನ್ನೂರ ವಿಷಾದ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಬುಧವಾರ ಮಾದ್ಯಮ ಪ್ರಕಟಣೆ ನೀಡಿರುವ ಅವರು ರಾಷ್ಟ್ರಕವಿ ಕುವೆಂಪು ಅವರು ಹೇಳಿದಂತೆ ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ, ಇಂತಹ ನಾಡಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ಸಂಚು ನಡೆಸುತ್ತಿರುವುದು ಅಕ್ಷಮ್ಯ ಅಪರಾಧ, ಎಂದು ಹೇಳಿದ ರಾಜು ಕುನ್ನೂರ ಸರಕಾರ ಬಿಗಿ ಕ್ರಮ ಕೈಗೊಳ್ಳುವ ಮೂಲಕ ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದರು.
ಶಾಲಾ ಕಾಲೇಜುಗಳು ಶಿಕ್ಷಣ ನೀಡುವ ದೇವಾಲಯಗಳು ದೇವರ ಎದುರಿಗೆ ಎಲ್ಲರೂ ಸಮಾನರು, ಇದನ್ನರಿತು ಪ್ರತಿಯೊಬ್ಬರು ಒಂದು ಜಾತಿ ಧರ್ಮಕ್ಕೆ ಸೀಮಿತ ಉಳಿಸಿಕೊಳ್ಳದೆ ಶಾಲಾ-ಕಾಲೇಜುಗಳಲ್ಲಿ ಸೌಹಾರ್ಧಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.