ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸನ್ಮಾನ
ಬ್ಯಾಡಗಿ 4: ವಿದ್ಯಾರ್ಥಿಗಳಲ್ಲಿರುವ ಅಜ್ಞಾನ ದೂರ ಮಾಡಿ ಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವ ಶಿಕ್ಷಕರ ಸೇವೆ ನಿರಂತರವಾದದ್ದು ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಕರ್ತವ್ಯ ಪಾಲನೆ ಬಹುಮುಖ್ಯವಾಗಿರುತ್ತದೆ ಕಲ್ಲನ್ನು ಶಿಲೆಯಾಗಿಸುವ ಸಾಮರ್ಥ್ಯ ಇರುವುದು ಶಿಕ್ಷಕರಿಗೆ ಮಾತ್ರ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಪಟ್ಟಣದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆವರಣದಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು., ನಿರಂತರ ಕಲಿಕೆಯ ದೂರದೃಷ್ಟಿ ಇಟ್ಟುಕೊಂಡು ವಿದ್ಯಾರ್ಥಿಗಳ ಕನಸಿಗೆ ಯಾವುದೇ ಅಡೆತಡೆಯಾಗದಂತೆ ಕಲಿಕೆಗೆ ಒತ್ತು ನೀಡುವಲ್ಲಿ ನಮ್ಮ ತಾಲೂಕು ಶಿಕ್ಷಣ ಇಲಾಖೆ ಹಾಗೂ ಶಾಲೆಗಳ ಶಿಕ್ಷಕರು ಮಾಡಿದ್ದಾರೆ ಜಿಲ್ಲೆಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಿ ಜಿಲ್ಲೆಗೆ ನಮ್ಮ ತಾಲೂಕು ಪ್ರಥಮ ಸ್ಥಾನದಲ್ಲಿದೆ ಇದರಿಂದ ನಮ್ಮ ತಾಲೂಕಿಗೆ ಹೆಸರು ಬಂದಂತಾಗಿದೆ ಇದರ ಹಿಂದೆ ಶ್ರಮಿಸಿದ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಹಾಗೂ ಶಿಕ್ಷಕವೃಂದವರಿಗೆ ಕೃತಜ್ಞತೆಗಳನ್ನು ತಿಳಿಸಿದರು. ಈ ಸಾಲಿನಲ್ಲಿಅ75 ನಷ್ಷು ಫಲಿತಾಂಶ ಬಂದಿದ್ದು ಮುಂದಿನ ಸಾಲಿನಲ್ಲಿ ಇನ್ನು 100 ಕ್ಕೆ ನೂರರಷ್ಟು ಫಲಿತಾಂಶ ಬರುವಂತೆ ಮಕ್ಕಳನ್ನು ತಯಾರು ಮಾಡಬೇಕು ಎಂದು ಹೇಳಿದರು.ಸನ್ಮಾನ: ತಾಲೂಕಿನ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ವಿವಿಧ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶಾಸಕರಾದ ಬಸವರಾಜ ಶಿವಣ್ಣನವರ ಸನ್ಮಾನಿಸಿದರು. ಜಿಲ್ಲೆಯ ಮೂರನೇ ರಾಂಕ್ ನಲ್ಲಿ ಪಡೆದ ಶಶಿಕಲಾ ಹುಲಿಹಳ್ಳಿ ಸ್ಪಂದನ ಶಾಲೆ ಕದರಮಂಡಲಗಿ ಪ್ರಥಮ ಸ್ಥಾನ 625 ಕ್ಕೆ 619 ಅಂಕ ಪಡೆದಿದ್ದಾಳೆ. ಅನನ್ಯ ತಹಶೀಲ್ದಾರ್ ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆ ಬ್ಯಾಡಗಿ ಇವಳು 625 ಕ್ಕೆ 619 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾಳೆ. ಅಂಜನಾ ಕರಬಸಪ್ಪ ನಾಯ್ಕರ್ ಸ್ಪಂದನ ಪ್ರೌಢಶಾಲೆ ಕದರಮಂಡಲಗಿ ಇವಳು 625 ಕ್ಕೆ 616 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾಳೆ. ಯಶೋಧ ಸೋಮಶೇಖರ್ ಕುರಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಬ್ಯಾಡಗಿ ಇವಳು ತೃತೀಯ ಸ್ಥಾನ ಪಡೆದು 625 ಕ್ಕೆ 615 ಅಂಕ ಪಡೆದಿದ್ದಾಳೆ ಇವರೆಲ್ಲರಿಗೂ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ತಹಶೀಲ್ದಾರ್ ಫಿರೋಜ್ ಷಾ ಸೊಮನಕಟ್ಟಿ. ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಮಲ್ಲಿಕಾರ್ಜುನ್. ಪುರಸಭೆ ಮುಖ್ಯ ಅಧಿಕಾರಿ ವಿನಯ್ ಕುಮಾರ್. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ಜಿ ಕೋಟಿ. ಹಾಗೂ ಶಾಲೆಗಳ ಶಿಕ್ಷಕರು ಮತ್ತು ಮಕ್ಕಳ ಪಾಲಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.