ಗೋಕಾಕ್

ನಿರಂತರ ವಿದ್ಯುತ್ ಪೂರೈಕೆಗೆ ಉಪಕೇಂದ್ರ ಸಹಾಯಕ

ನಿರಂತರ ವಿದ್ಯುತ್ ಪೂರೈಕೆಗೆ ಉಪಕೇಂದ್ರ ಸಹಾಯಕ

ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ: ಗೋಸಬಾಳದಲ್ಲಿ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಗೋಕಾಕ 22: ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಶುಕ್ರವಾರ  ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್‍ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹೊಸ ಉಪಕೇಂದ್ರ ನಿರ್ಮಾಣದಿಂದ ಇಡೀ ರೈತ ಸಮೂಹಕ್ಕೆ ಸಮರ್ಪಕ ವಿದ್ಯುತ್ ಪೂರೈಕೆಯಾಗಲಿದೆ ಎಂದು ಅವರು ಹೇಳಿದರು.

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿ, ಗೋಸಬಾಳದಲ್ಲಿ ನಿರ್ಮಾಣವಾಗಲಿರುವ 110 ಕೆವ್ಹಿ ವಿದ್ಯುತ್ ಉಪಕೇಂದ್ರದಿಂದ ಕೃಷಿಯನ್ನೇ ಅವಲಂಬಿತರಾಗಿರುವ ರೈತರಿಗೆ ಅನುಕೂಲವಾಗಲಿದೆ. 110 ಕೆವ್ಹಿ 8 ವಿದ್ಯುತ್ ಉಪಕೇಂದ್ರಗಳ ಪೈಕಿ 6 ವಿದ್ಯುತ್ ಉಪಕೇಂದ್ರಗಳು ಅರಭಾವಿ ಮತಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿವೆ ಎಂದು ಅವರು ಹೇಳಿದರು.

ಮೆಳವಂಕಿ ಜಿಪಂ ಸದಸ್ಯೆ ಶಶಿಕಲಾ ಸಣ್ಣಕ್ಕಿ, ಹಿರಿಯ ಮುತ್ಸದ್ಧಿ ಅನಂತ ನಾಯಿಕ, ಜಿಪಂ ಮಾಜಿ ಸದಸ್ಯ ವಿಠ್ಠಲ ಸವದತ್ತಿ, ತಾಪಂ ಸದಸ್ಯರಾದ ನೀಲವ್ವಾ ಬಳಿಗಾರ, ಲಕ್ಷ್ಮಣ ನೀಲನ್ನವರ,  ಪ್ರಭಾಶುಗರ ನಿರ್ದೇಶಕ ಎಂ.ಆರ್. ಭೋವಿ, ರವಿ ಪರುಶೆಟ್ಟಿ, ಗೋಸಬಾಳ ಗ್ರಾಪಂ ಮಾಜಿ ಅಧ್ಯಕ್ಷರಾದ ರಾಮಯ್ಯಾ ಮಠದ, ಶಿವಲಿಂಗ ಬಳಿಗಾರ, ಬಿ.ಜಿ. ಪಾಟೀಲ, ಸುಭಾಸ ಹಾವಾಡಿ, ಮುಖಂಡರಾದ ಬಾಳಪ್ಪ ಬುಳ್ಳಿ, ಸತ್ತೆಪ್ಪ ಹೊಸಟ್ಟಿ, ಬಸವಂತ ಕೋಣಿ, ಲಕ್ಷ್ಮಣ ಚಂದರಗಿ, ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎನ್. ಮುತಾಲಿಕದೇಸಾಯಿ, ಎಸ್.ಬಿ. ಲೋಕನ್ನವರ, ಉಧ್ಯಮಿ ರಾಜೇಂದ್ರ ದೇಸಾಯಿ, ಕೆಪಿಟಿಸಿಎಲ್ ಬೆಳಗಾವಿ ಅಧೀಕ್ಷಕ ಅಭಿಯಂತರ ಶ್ರೀಕಾಂತ ಸಸಾಲಟ್ಟಿ ನಂದ ಮಾಡಮಗೇರಿ, ಸುಭಾಸ ಕರೆನ್ನವರ, ಸೇರಿದಂತೆ ಗೋಸಬಾಳ ಹಾಗೂ ಸುತ್ತಮುತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿ ಓದಿ