ಬಳ್ಳಾರಿ

ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಸ್ಥಾನಕ್ಕೆ ನಾಮಪತ್ರಗಳ ಸಲ್ಲಿಕೆ

ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಸ್ಥಾನಕ್ಕೆ ನಾಮಪತ್ರಗಳ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ

ಬಳ್ಳಾರಿ 23: ಕರ್ನಾಟಕ ವಿಧಾನ ಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಸ್ಥಾನಕ್ಕೆ 04 ಅಭ್ಯರ್ಥಿಗಳಿಂದ ಒಟ್ಟು 08 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ಕೊಂಡಯ್ಯ ಅವರು 04 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವೈ.ಎಂ.ಸತೀಶ ಅವರು 2 ನಾಮಪತ್ರಗಳನ್ನು ಹಾಗೂ ಪಕ್ಷೇತರರಾದ ಸಿ.ಎಂ.ಮಂಜುನಾಥ ಮತ್ತು ಗಂಗೀರೆಡ್ಡಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನಲೆ ನಿಯಂತ್ರಣ ಕೊಠಡಿ ಸ್ಥಾಪನೆ: ಕರ್ನಾಟಕ ವಿಧಾನ ಪರಿಷತ್‍ನ ಸ್ಥಳೀಯ ಪ್ರಾಧಿಕಾರ ಚುನಾವಣೆ-2021 ಘೋಷಣೆಯಾಗಿರುವ ಹಿನ್ನಲೆಯಲ್ಲಿ ನ.9ರಿಂದ ಡಿ.16ರವರೆಗೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ತಯಾರಿಕೆ/ಸರಬರಾಜು, ಕಳ್ಳಭಟ್ಟಿ ತಯಾರಿಕೆ, ಸಾಗಾಟ ಮತ್ತು ಮಾರಾಟವಾಗದಂತೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ನಿಯಂತ್ರಣ ಕೊಠಡಿ(ಅoಟಿಣಡಿoಟ ಖoom)ಯನ್ನು ತೆರೆಯಲಾಗಿದೆ ಎಂದು ಅಬಕಾರಿ ಇಲಾಖೆಯ ಡೆಪ್ಯೂಟಿ ಕಮೀಷನರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನಿಯಂತ್ರಣ ಕೊಠಡಿಯು ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ಚುನಾವಣಾ ನೀತಿಸಂಹಿತೆ ಮುಗಿಯುವವರೆಗೆ ಕಾರ್ಯನಿರ್ವಹಿಸಲಿದೆ. ಚುನಾವಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಬಕಾರಿ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ದೂ.ಸಂ.08392-275555ಗೆ ಮಾಹಿತಿ ನೀಡಬಹುದಾಗಿದೆ.

ಸುದ್ದಿ ಓದಿ