ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ
ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ
ಧಾರವಾಡ 05; ಕರ್ನಾಟಕ ರಾಜ್ಯ ಸರಕಾರಿ ಅಂಗವಿಕಲ ನೌಕರರ ಸಂಘವು ರಾಜ್ಯದ ಎಲ್ಲಾ ಇಲಾಖೆಗಳ ಅಂಗವಿಕಲತೆಯುಳ್ಳ ಸರ್ಕಾರಿ ನೌಕರರನ್ನು ಪ್ರತಿನಿಧಿಸುತ್ತಿರುವ ಸರ್ಕಾರದ ಅಧಿಕೃತ ಏಕೈಕ ಸಂಘವಾಗಿದ್ದು ಕಳೆದ 40 ವರ್ಷಗಳಿಂದ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಅಂಗವಿಕಲತೆಯುಳ್ಳ ನೌಕರರು ಸರ್ಕಾರಿ ಸೇವೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಾ ಮಾದರಿಯಾಗಿದ್ದಾರೆ. ಅದರೆ ಅವರಿಗೆ ಆದ ಕೆಲವೊಂದು ವಿಶೇಷ ಸೇವಾ ಸೌಲಭ್ಯಗಳು ಮುಂಬಡ್ತಿ ಹಾಗೂ ಕಾರ್ಯನಿರ್ವಹಿಸುತ್ತಿರುವ ಕಚೇರಿ ಸ್ಥಳಗಳಲ್ಲಿ ಅಂಗವಿಕಲರ ಸ್ನೇಹಿ ವಾತಾವರಣ ಯಾಂರ್ುಗಳು ವಿಶೇಷ ಚೇತನ ಸ್ನೇಹಿ ಶೌಚಾಲಯಗಳು ಇತ್ಯಾದಿ) ಕಲ್ಪಸಿದರೆ ಅವರೂ ಇನ್ನೂ ಪರಿಣಾಮಕಾರಿಯಾಗಿ ಹೆಚ್ಚಿನ ಉತ್ಸಾಹದಿಂದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ.ಬೆಂಗಳೂರು ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಘಟಕಗಳ ಅಂಗವಿಕಲ ನೌಕರರಿಗೆ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಪ್ರಕಾರ ಅವರಿಗೆ ದಕ್ಕಬೇಕಾದ ಸಾಂವಿಧಾನಾತ್ಮಕ ಹಕ್ಕುಗಳನ್ನು ಅನುಷ್ಠಾನಗೊಳಿಸಲು ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಪರಿಗಣಿಸಿ ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಸಲ್ಲಿಸಲಾಯಿತು.