ಮಾದಕ ವ್ಯಸನದಿಂದ ದೈಹಿಕ-ಮಾನಸಿಕ ಆರೋಗ್ಯಕ್ಕೆ ಹಾನಿ: ಎಲ್. ವೈ. ಶಿರಕೋಳ
Substance abuse harms physical and mental health: L. Y. Shirkol
ರಾಣೆಬೆನ್ನೂರು, ಜು.26: ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ಮೇಲೂ ದುಷ್ಪರಿಣಾಮ ಉಂಟಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಲ್. ವೈ. ಶಿರಕೋಳ ಹೇಳಿದರು.
ನಗರದ ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ್ತುೂಹಿ2026 ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವ್ಯಸನದಿಂದ ವ್ಯಕ್ತಿ ಆರೋಗ್ಯ, ಆರ್ಥಿಕ ಸ್ಥಿರತೆ ಹಾಗೂ ಜೀವನದ ಅಮೂಲ್ಯ ಅವಕಾಶಗಳನ್ನು ಕಳೆದುಕೊಳ್ಳುತ್ತಾನೆ. ಈ ದುಷ್ಪರಿಣಾಮಗಳಿಂದ ಸಮಾಜವನ್ನು ಮುಕ್ತಗೊಳಿಸಲು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಅವರು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿ ಅನಿತಾ ಡಿಸೋಜಾ ಮಾತನಾಡಿ, ವಿಶ್ವದಾದ್ಯಂತ ಮಾದಕ ವ್ಯಸನಕ್ಕೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು. ಮಾದಕ ವಸ್ತುಗಳ ಮಾರಾಟ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಕಾನೂನು ಕ್ರಮಗಳಿದ್ದರೂ, ಸಮಾಜದ ಸಹಭಾಗಿತ್ವವಿಲ್ಲದೆ ಈ ಪಿಡುಗನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಸಾಧ್ಯವಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಜೆ. ಲೋಕೇಶ್, ಪ್ರಾಚಾರ್ಯ ಡಾ. ಎಸ್. ಜಿ. ಮಾಕನೂರು, ನಗರಸಭೆ ಪೌರಾಯುಕ್ತ ಫಕ್ಕೀರ್ಪ ಇಂಗಳಗಿ, ಪಿಎಸ್ಐ ಡಿ. ಜಿ. ಪರಮೇಶ್, ಸಿಪಿಐ ವೆಂಕಟೇಶ್ ಎನ್. ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಎನ್. ಸಿ. ಕಾಡದೇವರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 