ಬಳ್ಳಾರಿ

ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗಣನೀಯ ಅಭಿವೃದ್ಧಿ: ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ

ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗಣನೀಯ ಅಭಿವೃದ್ಧಿ: ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ

405 ಅಡಿ ಎತ್ತರದಲ್ಲಿ ಹಾರಾಡಿದ ರಾಷ್ಟ್ರಧ್ವಜ: 11 ತುಕಡಿಗಳಿಂದ ಆಕರ್ಷಕ ಪಥಸಂಚಲನ

ಹೊಸಪೇಟೆ (ವಿಜಯನಗರ): ನೂತನವಾಗಿ ಉದಯಗೊಂಡ ವಿಜಯನಗರ ಜಿಲ್ಲೆಯು ಗತವೈಭವದ ಇತಿಹಾಸವನ್ನು ಹೊಂದಿದ್ದು, ವಿವಿಧ ಇಲಾಖೆಗಳಲ್ಲಿ ಗಣನೀಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರು ತಿಳಿಸಿದರು.

ಜಿಲ್ಲಾಡಳಿತ ವತಿಯಿಂದ ಗುರುವಾರ ನಗರದ ಮುನ್ಸಿಪಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ  ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ರಾಷ್ಟ್ರ ಧ್ವಜಾರೋಹಣದ ಆರಂಭಕ್ಕೂ ಮುನ್ನ ಮೈದಾನದಲ್ಲಿ ನಿಮರ್ಿಸಲಾಗಿರುವ 405 ಅಡಿ ಎತ್ತರದ ಬೃಹತ್ ಧ್ವಜಸ್ತಂಭದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಾಟಕ್ಕೆ ಚಾಲನೆ ನೀಡಿದರು.

ನಂತರ ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ನಂತರ ಪಥಸಂಚಲನವನ್ನು ವೀಕ್ಷಿಸಿದರು.

ಗಣರಾಜ್ಯೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು ಜ.26ರ ದಿನದಂದೇ ಇಡೀ ಸ್ವತಂತ್ರ ಭಾರತವನ್ನು ಗಣರಾಜ್ಯ ಎಂದು ಘೋಷಿಸಲಾಯಿತು, ಈ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಜಾರಿಯಾಯಿತು. ಸಾರಾನಾಥದಲ್ಲಿರುವ ಅಶೋಕನ ಕಾಲದ ಸಿಂಹ ಶಿಖರವನ್ನು 'ಸತ್ಯಮೇವ ಜಯತೇ' ಎಂಬ ಉಪನಿಷತ್ ವಾಕ್ಯದೊಂದಿಗೆ ಭಾರತದ ರಾಷ್ಟ್ರಧ್ವಜವಾಗಿ ಸ್ವೀಕರಿಸಲಾಯಿತು.

ಈ ಮೂರು ಭಾರತದ ಪ್ರಮುಖ ಐತಿಹಾಸಿಕ ಘಟನೆಗಳು ಈ ದಿನದಂದೇ ಜರುಗಿದೆ. ಸಾಂವಿಧಾನಿಕವಾಗಿ ನಮ್ಮ ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನ ರಾಷ್ಟ್ರದ ಅಸ್ತಿತ್ವ ಹಾಗೂ ಸಾರ್ವಭೌಮತ್ವವನ್ನು ಸಾರುತ್ತಿವೆ. ಈ ಹಿನ್ನೆಲೆಯಲ್ಲಿ ಇವುಗಳಿಗೆ ಗೌರವ ದೊರಕಿಸಿಕೊಡುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದರು.

ವಿಜಯನಗರ ಜಿಲ್ಲೆಯು ಅತ್ಯಂತ ವಿಶಿಷ್ಟ ಜಿಲ್ಲೆಯಾಗಿದ್ದು, ಐತಿಹಾಸಿಕ, ಪೌರಾಣಿಕ ಹಿನ್ನೆಲೆಯುಳ್ಳ ನಮ್ಮ ಈ ಜಿಲ್ಲೆ ರಾಜ್ಯದಲ್ಲಿ ನೂತನ ಜಿಲ್ಲೆಯಾಗಿದೆ. ಕೃಷಿ, ಗಣಿ, ಪ್ರವಾಸೋದ್ಯಮ ಕ್ಷೇತ್ರಗಳ ಹಿನ್ನೆಲೆಯಲ್ಲಿಯೂ ಈ ಜಿಲ್ಲೆಗೆ ಮಹತ್ವದ ಸ್ಥಾನವಿದೆ. ಜಗತ್ತಿನಲ್ಲಿಯೇ ಕೆಲವೇ ಕೆಲವು ವಿಶ್ವಪಾರಂಪರಿಕ ತಾಣಗಳಲ್ಲಿ ಹಂಪಿಯ ಸ್ಮಾರಕಗಳು ಇರುವುದು ಈ ನಮ್ಮ ನೂತನ ಜಿಲ್ಲೆಯ ಹಿರಿಮೆ ಗರಿಮೆಯಾಗಿದೆ.

ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿ ಮೆರೆದ ಹಂಪಿ ಇಂದಿಗೂ ತನ್ನದೇ ವಿಶಿಷ್ಟ ಮಹತ್ವ ಹೊಂದಿದೆ. ಕಳೆದ ವರ್ಷದ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಕರ್ನಾ ಟಕ ರಾಜ್ಯವನ್ನು ಪ್ರತಿನಿಧಿಸಿದ ಸ್ತಬ್ದಚಿತ್ರವು ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನ ಪಟ್ಟಾಭಿಷೇಕವನ್ನು ಬಿಂಬಿಸುವ ಸ್ತಬ್ಧ ಚಿತ್ರವಾಗಿತ್ತು ಎಂಬುದು ನಾವೆಲ್ಲರೂ ಹೆಮ್ಮೆಪಡುವ ವಿಷಯವಾಗಿದೆ ಎಂದರು.

ನೂತನ ವಿಜಯನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ, ಆರೋಗ್ಯ ಇಲಾಖೆ, ಮುಜರಾಯಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಯೋಜನೆಗಳನ್ನು ಜನರಿಗೆ ಒದಗಿಸಲು ಜಿಲ್ಲಾಡಳಿತವು ಕಾರ್ಯಗತವಾಗಿದೆ.

 ವಿಶೇಷವಾಗಿ ಜಿಲ್ಲಾ ಖನಿಜ ನಿಧಿಯಿಂದ 130 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿದೆ, ಈಗಾಗಲೇ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಗಣರಾಜ್ಯೋತ್ಸವ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಭವ್ಯ ಭಾರತದ ಭವಿಷ್ಯ ನಿಮರ್ಾಣ ಆಗುವಂತಹ ನಿಟ್ಟಿನಲ್ಲಿ ದೇಶಪ್ರೇಮ ಯುವಜನರಲ್ಲಿ ಮೂಡಬೇಕು. ಅಂತಹ ಶಕ್ತಿ ನಿಮ್ಮಲ್ಲಿದೆ ಅದನ್ನು ಮನದಲ್ಲಿಟ್ಟುಕೊಂಡು ಕಾರ್ಯಗತರಾಗಬೇಕು ಎಂದು ವಿದ್ಯಾಥರ್ಿಗಳನ್ನು ಉದ್ದೇಶಿಸಿ ಹೇಳಿದರು.

ಪಥಸಂಚಲನದಲ್ಲಿ 11 ತುಕಡಿಗಳು:

ಗಣರಾಜ್ಯೋತ್ಸವ ಅಂಗವಾಗಿ ಈ ಬಾರಿ ನೆರವೇರಿದ ಪಥಸಂಚಲನವು ಪರೇಡ್ ಕಮಾಂಡರ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಪಡೆ, ಮಹಿಳಾ ಪೊಲೀಸ್, ಶಸ್ತ್ರಸಜ್ಜಿತ ಗೃಹರಕ್ಷಕ ದಳ, ವಿಜಯನಗರ ಕಾಲೇಜಿನ ಎನ್ಸಿಸಿ ತಂಡ, ಶಂಕರ್ ಆನಂದ್ ಸಿಂಗ್ ಸರ್ಕಾ ರಿ ಪ್ರಥಮ ದರ್ಜೆ  ಕಾಲೇಜಿನ ಎನ್ಸಿಸಿ ತಂಡ, ಭಾರತ ಸೇವಾದಳ, ಸ್ಕೌಟ್ ಮತ್ತು ಗೈಡ್ಸ್, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿ ಕರು ಸೇರಿದಂತೆ ಈ ಬಾರಿ ವಿಶೇಷವಾಗಿ ಗ್ರಾಮ ಕಾಯಕ ಪಡೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.

 ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್, ನಗರಸಭೆ ಅಧ್ಯಕ್ಷೆ ಸುಂಕಮ್ಮ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ಅಪರ ಜಿಲ್ಲಾಧಿಕಾರಿ ಅನುರಾಧ ಕೆ., ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಇದ್ದರು 

ಸುದ್ದಿ ಓದಿ