ಸತತ ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ

ಸತತ ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ Success is possible through consistent effort.

ಕೊಪ್ಪಳ 14: ಮಕ್ಕಳಿಗೆ  ಉತ್ತಮ ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯವಾಗಿದೆ  ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿ ಮಕ್ಕಳು ಸತತ ಪರಿಶ್ರಮ ದಿಂದ ಯಶಸ್ಸು ಕಾಣಲು ಸಾಧ್ಯವಾಗಿದೆ ಎಂದು ಹಿರಿಯ ವೈದ್ಯ ಡಾ ಕೆ ,ಜಿ,  ಕುಲಕರಣಿ ಅಭಿಪ್ರಾಯ ಪಟ್ಟರು,ಅವರು ರವಿವಾರ ನಗರದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಸಾಂಸ್ಕೃತಿಕ ಕ್ರೀಡೆ ಮತ್ತು ತರಬೇತಿ ಸಂಸ್ಥೆ ವತಿಯಿಂದ ಸಾಹಿತಿ ಶಿಕ್ಷಣ ಪ್ರೇಮಿ ದಿವಂಗತ ಹಾಜಿ ವಹಿದುದ್ದೀನ್ ರವರ ಸ್ಮರಣೆಗಾಗಿ ಶಿಕ್ಷಣದಲ್ಲಿ ನೈತಿಕ ಮೌಲ್ಯ ಎಂಬ ವಿಷಯ ಕುರಿತು ಏರಿ​‍್ಡಸಿದ ವಿಚಾರ ಸಂಕೀರ್ಣ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಗಣಿನೀಯ ಸಾಧನೆ ಮಾಡಿ  ರಾಜ್ಯ ಮತ್ತು ಜಿಲ್ಲೆಯ ಕೀರ್ತಿ ತರುವಲ್ಲಿ ಯಶಸ್ವಿಯಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನೆರವೇರಿಸಿ ಪ್ರತಿಭಾವಂತ ಮಕ್ಕಳಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಮುಂದುವರೆದು ಮಾತನಾಡಿ ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲಗೊಳ್ಳಲು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಅತ್ಯವಶ್ಯಕವಾಗಿದೆ ಮಕ್ಕಳ ಮೇಲೆ  ಶಿಕ್ಷಕರಷ್ಟೇ ಪಾಲಕರ ಜವಾಬ್ದಾರಿ ಕೂಡ ಹೆಚ್ಚಾಗಿದೆ,