ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ: ನದಾಫ
Success is possible through continuous hard work: Nadaf
ತಾಳಿಕೋಟಿ 26 : ನಿರಂತರ ಪರಿಶ್ರಮದೊಂದಿಗೆ ಬುದ್ಧಿವಂತಿಕೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದರೆ ಸುಲಭವಾಗಿ ಯಶಸ್ಸು ಗಳಿಸಲು ಸಾಧ್ಯ ಎಂದು ಮುದ್ದೇಬಿಹಾಳ ಎಂ.ಜಿ.ವ್ಹಿ.ಸಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಎಚ್.ಡಿ. ನದಾಫ್ ಹೇಳಿದರು. ಗುರುವಾರ ಪಟ್ಟಣದ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಉಪನ್ಯಾಸ ಮಾಲಿಕೆ 5ರಲ್ಲಿ "ಸ್ಪರ್ಧಾತ್ಮಕ ಪರೀಕ್ಷೆ ತಯಾರಿ" ಕುರಿತು ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರಕಾರಿ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಲು ಸಾಕಷ್ಟು ಪರಿಶ್ರಮ ಹಾಕಬೇಕಾಗಿದೆ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿಗಳಿದ್ದರೂ ಸ್ಪರ್ಧಾತ್ಮಕ ತಯಾರಿಕೆ ಸೌಲಭ್ಯವಿಲ್ಲದ ಕಾರಣ ತಯಾರಿ ಮಟಕುಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ವೀ.ವಿ. ಸಂಘದ ಸಹ ಕಾರ್ಯದರ್ಶಿ ಕಾಶಿನಾಥ್ ಮುರಾಳ ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವುದು ಪ್ರತಿ ವಿದ್ಯಾರ್ಥಿಯ ಆಸೆಯಾಗಿರುತ್ತದೆ. ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳುವ ಕ್ರಮ ಬಹಳ ಮುಖ್ಯವಾಗಿರುತ್ತದೆ ಎಂದು ಹೇಳಿದರು. ವೀ.ವಿ. ಸಂಘದ ನಿರ್ದೇಶಕ ಸಿ.ಆರ್. ಕತ್ತಿ ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಸಮಯದಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡ ಸಹಜವಾಗಿಯೇ ಇರುತ್ತದೆ. ಹೀಗಾಗಿ ಈ ಸಮಯದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ಓದುವ ಬದಲು ಕೆಲವು ವಿಧಾನಗಳನ್ನು ಅನುಸರಿಸಿಕೋಂಡು ಓದಿದರೆ ಉತ್ತಮ ಫಲಿತಾಂಶ ಪಡೆಯಲು ನೆರವಾಗುತ್ತದೆ ಎಂದು ಹೇಳಿದರು. ಎಂ.ಎ. ಪೋತದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ.ಆರ್.ಎಂ. ಬಂಟನೂರ ಅವರು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಸಮಯದಲ್ಲಿ ನಿಮ್ಮ ಮೇಲೆ ನಿಮಗೆ ಮೊದಲು ನಂಭಿಕೆ ಇರಲಿ. ಪ್ರಶ್ನೆಗಳಿಗೆ ಉತ್ತರಿಸುವಾಗ ಅತಿಯಾಗಿ ಯೋಚಿಸದಿರಲು ಪ್ರಯತ್ನಿಸಿ, ಯಾವುದೇ ಕಾರಣಕ್ಕೂ ಗುರಿಯಿಂದ ವಿಮುಖರಾಗದೆ ದೂರಚಿತ್ತದಿಂದ ಪರೀಕ್ಷೆಯ ತಯಾರಿಯನ್ನು ನಡೆಸಬೇಕು ಎಂದರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು ಕಾರ್ಯಕ್ರಮದಲ್ಲಿ ಕಾಲೇಜಿನ ಸರ್ವ ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪಾರ್ವತಿ ಹಾಗೂ ಸಂಗಡಿಗರು ಪ್ರಾರ್ಥನೆಗೈದರು. ಭಾಗ್ಯಶ್ರೀ ಹಾಗೂ ಸಂಗಡಿಗರು ಎನ್.ಎಸ್.ಎಸ್ ಗೀತೆ ಹಾಡಿದರು. ನೇತ್ರಾವತಿ ಸ್ವಾಗತಿಸಿ ಪರಿಚಯಿಸಿದರು. ವರ್ಷಾ ತೊಂಡಿಹಾಳ ವಂದಿಸಿದರು, ದೀಪಿಕಾ ಕಾರ್ಯಕ್ರಮವನ್ನು ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 