ಇಂಡಿ

ಅಕ್ಷರ ದಾಸೋಹ ಯೋಜನೆ ಯಶಸ್ವಿಗೊಳಿಸಿ: ಯರೆಗುದ್ರಿ

ಅಕ್ಷರ ದಾಸೋಹ ಯೋಜನೆ ಯಶಸ್ವಿಗೊಳಿಸಿ: ಯರೆಗುದ್ರಿ

ಇಂಡಿ 15:  ಪೌಷ್ಠಿಕಾಂಶ ಹೆಚ್ಚಿಸುವುದರ ಮೂಲಕ ಶಾಲಾ ಮಕ್ಕಳ ಆರೋಗ್ಯವನ್ನು ಅಭಿವೃದ್ಧಿಗೊಳಿಸುವುದು. ಶಾಲಾ ಮಕ್ಕಳ ದಾಖಲಾತಿ ಮತ್ತು ಹಾಜರಾತಿಯನ್ನು ಹೆಚ್ಚಿಸುವುದು.ಶೈಕ್ಷಣಿಕ ವರ್ಷದಲ್ಲಿ ಮಧ್ಯೆ ಮಧ್ಯೆ ಶಾಲೆಯನ್ನು ತೊರೆಯದಂತೆ ತಡೆಯುವುದು. ಶಾಲಾ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವುದು. ಬರಪೀಡಿತ ಪ್ರದೇಶಗಳಿಗೆ ಬೇಸಿಗೆ ರಜೆ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ನೀಡಲಾಗುತ್ತಿದೆ ಎಂದು ತಾಲೂಕಾ ಅಕ್ಷರ ದಾಸೋಹ ಯೋಜನಾ ಅಧಿಕಾರಿ ಮಲ್ಲಿಕಾರ್ಜುನ ಯರಗುದ್ರಿ ಹೇಳಿದರು. ತಾಲೂಕಿನ ಹಿರೇರೂಗಿ  ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ 49 ದಿನಗಳ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿಯನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಮಧ್ಯಾಹ್ನ ಉಪಹಾರ ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು. ಮಕ್ಕಳ ಭೌತಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಕಾರ್ಯಕ್ರಮದ  ಅನುಷ್ಠಾನದಲ್ಲಿ ಹೆಚ್ಚಿನ ಕಾಳಜಿ, ಜವಾಬ್ದಾರಿ ವಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಸಾಮಾಜಿಕ ಸಮಾನತೆಯನ್ನು ಅಭಿವೃದ್ಧಿ ಪಡಿಸಿ ತನ್ಮೂಲಕ ರಾಷ್ಟ್ರೀಯ ಭಾವೈಕ್ಯತೆಯನ್ನು ಮಕ್ಕಳಲ್ಲಿ ಮೂಡಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.ಶಾಲಾ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ,ಕನ್ನಡ ಶಿಕ್ಷಕ ಬಸವರಾಜ ಕರಜಗಿ,ಇಂಗ್ಲೀಷ್ï ಶಿಕ್ಷಕ ಸಂತೋಷ ಬಂಡೆ, ಉರ್ದು ಶಿಕ್ಷಕಿ ಎಸ್ ಎಚ್ ಮೈದರಗಿ,ಎಸ್ ಎಚ್ ಹೆಬ್ಬಾಳ ಹಾಗೂ ಪಾಲಕರು, ಮಕ್ಕಳು ಉಪಸ್ಥಿತರಿದ್ದರು.

ಸುದ್ದಿ ಓದಿ