ಹಳ್ಳೂರಿನಲ್ಲಿ ಯಶಸ್ವಿ ಪ್ರಜಾಸೇವೆ ಅಭಿಯಾನ: 42 ಅರ್ಜಿ ಸ್ವೀಕಾರ
Successful 'Praja Seve' (Public Service) campaign in Hallur: 42 applications received
ಹಳ್ಳೂರ, ಸೆ.19: ಮೂಡಲಗಿ ತಾಲೂಕಿನ ಅರಭಾವಿ ಹೋಬಳಿಯ ಹಳ್ಳೂರು ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ದೇವಸ್ಥಾನದ ಆವರಣದಲ್ಲಿ ‘ಪ್ರಜಾಸೇವೆ ಅಭಿಯಾನ’ ಯಶಸ್ವಿಯಾಗಿ ನಡೆಯಿತು.
ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿ ಶ್ರೀಶೈಲ ಗುಡುಮೆ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಗ್ರಾಮಸ್ಥರಿಂದ ವಿವಿಧ ಬೇಡಿಕೆ ಹಾಗೂ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಒಟ್ಟು 42 ಅರ್ಜಿಗಳನ್ನು ಸ್ವೀಕರಿಸಲಾಯಿತು. ಎಲ್ಲ ಅರ್ಜಿಗಳನ್ನು ಸ್ಥಳದಲ್ಲಿಯೇ ಐಪಿಜಿಆರ್ಎಸ್ ತಂತ್ರಾಂಶದಲ್ಲಿ ದಾಖಲಿಸಲಾಯಿತು.
ಗ್ರಾಮಕ್ಕೆ ಸಮರ್ಕ ಸರ್ಕಾರಿ ಬಸ್ ಸೌಲಭ್ಯ, ನಿರಂತರ ವಿದ್ಯುತ್ ಪೂರೈಕೆ, ಅರ್ಹರಿಗೆ ವೃದ್ಧಾಪ್ಯ, ವಿಧವಾ ಹಾಗೂ ವಿಕಲಚೇತನ ಪಿಂಚಣಿ, ಸಿಸಿಟಿವಿ ಕ್ಯಾಮೆರಾಗಳ ನಿರ್ವಹಣೆ, ವೈದ್ಯಕೀಯ ಸೌಲಭ್ಯ, ರಸ್ತೆ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಕಾಲಮಿತಿಯೊಳಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಶ್ರೀಶೈಲ ಗುಡುಮೆ ಸೂಚಿಸಿದರು.
ತಾಲೂಕು ಪಂಚಾಯತ್, ಕಂದಾಯ, ಭೂ ದಾಖಲೆ, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ರೇಷ್ಮೆ, ಅರಣ್ಯ ಹಾಗೂ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ, ಉಪ ತಹಶೀಲ್ದಾರ್ ಪರಸಪ್ಪ ನಾಯ್ಕ, ಕಂದಾಯ ನೀರೀಕ್ಷಕ ಸುರೇಶ ತುಪ್ಪದ, ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ನೆರ್ಲೀಕರ್, ಪಿಎಸ್ಐ ರಾಜೀವ್ ಪೂಜಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 