ಹಳ್ಳಿ ಹೈದನಿಗೆ ರಾಜ್ಯಪಾಲರಿಂದ ಚಿನ್ನದ ಪದಕ

Sudarshan Hanuma Gowda Police Patil awarded gold medal by Governor

ಕೊಪ್ಪಳ 07: ತಾಲೂಕಿನ ಮುದ್ದಾಬಳ್ಳಿ ಗ್ರಾಮದ ಸುದರ್ಶನ್ ಹನುಮಗೌಡ ಪೊಲೀಸ್ ಪಾಟೀಲ್ ಗೆ,ಎಂ ಎಸ್ಸಿ ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಅಂಕ ಪಡೆದ ಪ್ರಯುಕ್ತ ಚಿನ್ನದ ಪದಕ ಲಭಿಸಿದೆ.ದಿನಾಂಕ 6 ರಂದು ಬೆಂಗಳೂರಿನಲ್ಲಿ ಜರುಗಿದ  ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 27ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ, ಚಿನ್ನದ ಪದಕ ಹಾಗು ಪ್ರಮಾಣ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. 

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಂ ಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ, *ಸಮುದಾಯ ಆರೋಗ್ಯ್ಘ ಶುಶ್ರೂಷೆ* ಎಂಬ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರಯುಕ್ತ ಚಿನ್ನದ ಪದಕ ಪಡೆದಿದ್ದಾರೆ. 

ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಉಪಕುಲಪತಿ ಡಾ.ಭಗವಾನ್ ಮತ್ತು ಅಜೀಂ ಪ್ರೇಮ್ ಜೀ ಫೌಂಡೇಶನ್ ಅದ್ಯಕ್ಷ ಅಜೀಂ ಪ್ರೇಮ್ ಜೀ ಮತ್ತಿತರಿದ್ದರು.ಸುದರ್ಶನ್ ಗೆ ಚಿನ್ನದ ಪದಕ ಲಭಿಸಿದ್ದಕ್ಕೆ ಆತನ ತಂದೆ ತಾಯಿ,ಕುಟುಂಬ ವರ್ಗ ಮತ್ತು ಕಾಲೇಜಿನ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.