ಶಿವಸೇನೆ ಸಂಸದ ಸಂಜಯ್ ಜಾಧವ್ ಹಠಾತ್ ರಾಜೀನಾಮೆ
ಮುಂಬೈ, ಆಗುಸ್ಟ್ 27 : ಮಹತ್ವದ ಬೆಳವಣಿಗೆಯಲ್ಲಿ ಪಕ್ಷದ ಬಗ್ಗೆ ಅಸಮಾಧಾನ ಹೊಂದಿದ್ದ
ಮಹಾರಾಷ್ಟ್ರ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜಾಧವ್ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಂಸದನಾಗಿ ಕ್ಷೇತ್ರದ ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಸಂಸದನಾಗಿ ಮುಂದುವರೆಯಲು ಮುಜುಗರವಾಗಿದೆ ,ರಾಜೀನಾಮೆಯನ್ನು ಅಂಗೀಕರಿಸುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
'ಪರಭಾನಿಯ ಜಿಂತೂರ್ ಎಪಿಎಂಸಿಯ ಆಡಳಿತಾಧಿಕಾರಿಗಳ ನೇಮಕದ ಬಗ್ಗೆ ಎನ್ಸಿಪಿಯ ವ್ಯಕ್ತಿಯೊಬ್ಬರನ್ನು ಸರ್ಕಾರೇತರ ಆಡಳಿತಾಧಿಕಾರಿಯಾಗಿ ನೇಮಕ ಮಾಡಿರುವುದೇ ಈ ಬೆಳವಣಿಗೆ ಕಾರಣ ಎನ್ನಲಾಗಿದ್ದು, ಇದು ಶಿವಸೇನೆ ಕಾರ್ಯಕರ್ತರಿಗೆ ಮಾಡಿದ ಅವಮಾನವಾಗಿದೆ ಎಂದೂ ಜಾಧವ್ ನೋವು ತೋಡಿಕೊಂಡಿದ್ದಾರೆ .