ಭಾರತಕ್ಕೆ ಹಸ್ತಾಂತರಿಸಿದರೆ ಆತ್ಮಹತ್ಯೆ : ನೀರವ್ ಮೋದಿ ಬೆದರಿಕೆ
ಲಂಡನ್, ನ 7: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಕೋಟ್ಯಂತರ ರೂ ಪಂಗನಾಮ ಪ್ರಕರಣದಲ್ಲಿ ಲಂಡನ್ ನ ಜೈಲಿನಲ್ಲಿರುವ ವಜ್ರೋದ್ಯಮಿ ನೀರವ್ ಮೋದಿ ಭಾರತಕ್ಕೆ ಹಸ್ತಾಂತರಿಸಿದ್ದೇ ಆದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದಾರೆ.
ಇಂಗ್ಲೆಂಡ್ನ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹಾಜರಾದ ಅವರು, ತಮಗೆ ಜೈಲಿನಲ್ಲಿ ಮೂರು ಬಾರಿ ಹೊಡೆಯಲಾಗಿದೆ ಹಾಗೂ ತಮ್ಮನ್ನು ಭಾರತಕ್ಕೆ ಹಸ್ತಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ, ಭಾರತದಲ್ಲಿ ನ್ಯಾಯಯುತ ವಿಚಾರಣೆ ನಡೆಯುವ ವಿಶ್ವಾಸ ತಮಗಿಲ್ಲ ಎಂದಿದ್ದಾರೆ. ಆದರೂ ನ್ಯಾಯಾಲಯ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.
ನೀರವ್ ಮೋದಿಯ ಐದನೇ ಜಾಮೀನು ಅರ್ಜಿಯನ್ನು ಬುಧವಾರ ಅವರ ವಕೀಲ ಹುಗೋ ಕೀತ್ ಕ್ಯು ಸಿ ಸಲ್ಲಿಸಿದರು. ಅವರ ಪರ ವಾದ ಮಂಡಿಸಿದ ವಕೀಲ ತಮ್ಮ ಕಕ್ಷಿದಾರರಿಗೆ ಕಾರಾಗೃಹದಲ್ಲಿ ಎರಡು ಬಾರಿ ಹಾಗೂ ಕಳೆದ ಮಂಗಳವಾರ ಹೊಡೆಯಲಾಗಿದೆ ಎಂದರು.
ಅಲ್ಲದೇ ಹಲ್ಲೆಗೆ ಜೈಲಿನ ಅಧಿಕಾರಿಗಳು ಪ್ರತಿಕ್ರಯಿಸಲಿಲ್ಲ ಮತ್ತು ನೀರವ್ ಮೋದಿ ವಕೀಲರನ್ನು ಭೇಟಿಯಾಗುವ ಅವಕಾಶವನ್ನೂ ನಿರಾಕರಿಸಲಾಯಿತು ಎಂದು ಅವರ ವಕೀಲರು ಆರೋಪಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 