ವಿಶ್ವನಾಥ್ ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ: ಸಚಿವ ಎಸ್.ಟಿ.ಸೋಮಶೇಖರ್
ತುಮಕೂರು, ಜೂ.19, ವಿಧಾನಪರಿಷತ್ ಸ್ಥಾನಕ್ಕೆ ಎಚ್. ವಿಶ್ವನಾಥ್ ಅವರಿಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ನಾವೂ ಸಹ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇವೆ. ಅವರಿಗೆ ಮುಂದಿನ ದಿನಗಳಲ್ಲಿ ಸ್ಥಾನ ಕೊಡುವ ಭರವಸೆಯನ್ನು ಕೊಟ್ಟಿದ್ದಾರೆ. ಅಲ್ಲದೆ, ಕೋರ್ ಕಮಿಟಿ ಪಟ್ಟಿಯಲ್ಲಿ ವಿಶ್ವನಾಥ್ ಹೆಸರನ್ನು ಸೇರಿಸಲಾಗಿದ್ದರೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಶೇಕಡಾ 90ರಷ್ಟು ಬೇಡಿಕೆಗಳನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೂ ಸೂಕ್ತ ವ್ಯವಸ್ಥೆ ಆಗಲಿದೆ. ಇನ್ನು ಮುನಿರತ್ನ ಹಾಗೂ ಪ್ರತಾಪ್ ಗೌಡ ಪಾಟೀಲ್ ಅವರ ಕ್ಷೇತ್ರಗಳಿಗೆ ಚುನಾವಣೆಯಾಗಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿಯ ಯಾವೊಬ್ಬ ಶಾಸಕರೂ ಸಹ ಅಸಮಾಧಾನಗೊಂಡಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ. ಆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಬಳಿ ಹೇಳಿಕೊಂಡಿದ್ದಾರೆ. ಅಷ್ಟೇ ಬಿಟ್ಟರೆ ಯಾರಿಂದಲೂ ಅಸಮಾಧಾನ ಇಲ್ಲ ಎಂದು ಸಚಿವರು ತಿಳಿಸಿದರು.ಎಪಿಎಂಸಿ ವ್ಯವಸ್ಥೆಗೆ ದಕ್ಕೆ ಇಲ್ಲ: ಎಪಿಎಂಸಿ ಇರುವುದೇ ರೈತರಿಗೋಸ್ಕರ. ಕಾಯ್ದೆ ತಿದ್ದುಪಡಿಯಿಂದ ಯಾರಿಗೂ ತೊಂದರೆಯಾಗಿಲ್ಲ. ಇದರಿಂದ ಎಪಿಎಂಸಿ ವ್ಯವಸ್ಥೆಗೆ ಯಾವುದೇ ದಕ್ಕೆಯಾಗದು. ಕಾಯ್ದೆ ತಿದ್ದಪಡಿಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ರೈತರು ಎಲ್ಲಿ ಬೇಕಿದ್ದರೂ ತಮ್ಮ ಬೆಳೆಗಳನ್ನು ಮಾರಾಟ ಮಾಡಬಹುದಾಗಿದೆ. ಬಹು ರಾಷ್ಟ್ರೀಯ ಕಂಪನಿಗಳು ಬರುವುದರಿಂದ ಯಾವುದೇ ಸಮಸ್ಯೆಯಾಗದು. ಅವರೇ ರೈತರ ಹೊಲಗಳಿಗೆ ಬಂದು ನೇರವಾಗಿ ಖರೀದಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಸಿದ್ಧಗಂಗಾ ಮಠಕ್ಕೆ ಎಸ್ ಟಿ ಎಸ್- ಬಿ.ಸಿ.ಪಾಟೀಲ್ ಭೇಟಿ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬೇಟಿ ನೀಡಿ ಸಿದ್ಧಗಂಗಾ ಮಹಾಯೋಗಿಗಳ ಗದ್ದುಗೆಗೆ ತೆರಳಿ ಪೂಜೆ ನೆರವೇರಿಸಿದರು. ಅಲ್ಲಿಂದ ಜ್ಞಾನ ಮಂದಿರಕ್ಕೆ ತೆರಳಿ ಮಹಾಯೋಗಿಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಿದ್ಧಲಿಂಗ ಮಹಾಸ್ವಾಮಿಗಳ ಭೇಟಿ ಮಾಡಿದ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಆಶೀರ್ವಾದ ಪಡೆದರು. ಇದೇ ವೇಳೆ ಶ್ರೀಗಳ ಯೋಗಕ್ಷೇಮ ವಿಚಾರಿಸಲಾಯಿತು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 