ಮುಂದಗೋಡ

5-16ವರ್ಷದ ಮಕ್ಕಳಿಗೆ ಬೇಸಿಗೆ ಶಿಬಿರ

5-16ವರ್ಷದ ಮಕ್ಕಳಿಗೆ ಬೇಸಿಗೆ ಶಿಬಿರ

ಲೋಕದರ್ಶನ ವರದಿ 

ಮುಂಡಗೋಡ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ 

ಮುಂಡಗೋಡ ಹಾಗೂ ತಾಲೂಕಾ ಬಾಲಭವನ ಸೊಸೈಟಿ ಇವರ ಸಹಯೋಗದಲ್ಲಿ 2022-23ನೇ ಸಾಲಿಗೆ ಸಂಬಂಧಿಸಿದಂತೆ 5-16ವರ್ಷದ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ದಿನಾಂಕ 05-05-2022ರಿಂದ12-05-2022ರವರೆಗೆ ಪ್ರತಿದಿನ ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೆ ನಡೆಸಲಾಗುತ್ತದೆ. ಶಿಬಿರದಲ್ಲಿ ಮಕ್ಕಳಿಗೆ ಕ್ರಿಯಾತ್ಮಕ ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ಕಲಿಸಿಕೊಡಲಾಗುವುದು. ಶಿಬಿರಕ್ಕೆ ಮಕ್ಕಳನ್ನು ಕಳುಹಿಸಲಿಚ್ಛಿಸುವ ಪಾಲಕರು ನಿಗದಿತವಾದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 30-04-2022ರೊಳಗೆ ಶಿಶು ಅಭಿವೃದ್ಧಿ ಯೋಜನೆ ಮುಂಡಗೋಡ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಛೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ದೀಪಾ ಬಂಗೇರ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ