ಸೂರ್ಯಕಾಂತಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ

ಸೂರ್ಯಕಾಂತಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ Support price fixed for purchase of sunflower seeds: District Collector

ಲೋಕದರ್ಶನ ವರದಿ 

ಗದಗ ಮೇ 13: 2025-26 ನೇ ಸಾಲಿನ  ಬೆಂಬಲ ಬೆಲೆ ಯೋಜನೆಯಡಿಯಲ್ಲಿ  ರೈತರಿಂದ ಎಫ್‌.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್  ತಿಳಿಸಿದರು.    

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಶುಕ್ರವಾರ 2026 ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಜಿಲ್ಲೆಯ ಪ್ರತಿ ರೈತರಿಂದ  ಪ್ರತಿ ಎಕರೆಗೆ 04 ಕ್ವಿಂಟಲ್‌ನಂತೆ ಗರಿಷ್ಟ 20 ಕ್ವಿಂಟಲ್ ಎಫ್‌.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಹಾಗೂ ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸದಂತೆ  ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು  ಜಿಲ್ಲಾಧಿಕಾರಿಗಳು ಸೂಚಿಸಿದರು. 

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಸುಧಾ ಆರ್ ಬಂಡಿ ಮಾತನಾಡಿ ಎಫ್‌.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ರೂ. 7721 ರಂತೆ  ನಿಗದಿಪಡಿಸಲಾಗಿದೆ.   ಕೇಂದ್ರ ಸರ್ಕಾರದ  ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಸದರಿ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 50 ದಿನಗಳವರೆಗೆ  ಹಾಗೂ ಖರೀದಿ ಅವಧಿಯನ್ನು 60 ದಿನಗಳವರಗೆ ನಿಗದಿಪಡಿಸಲಾಗಿದೆ.  ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಿ ಕೇಂದ್ರದಿಂದ ಎನ್‌.ಸಿ.ಸಿ.ಎಫ್ ಹಾಗೂ ರಾಜ್ಯದಲ್ಲಿ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ (ಕೆ.ಓ.ಎಫ್) ಬೇಂಗಳೂರು   ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.  

ಈ ಕೆಳಕಾಣಿಸಿದ 13 ಸ್ಥಳಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು. 

ಗದಗ  ತಾಲೂಕು      :OGCS :,ಹೊಂಬಳ, 

ನರಗುಂದ OGCS : ನರಗುಂದ,ಚಿಕ್ಕನರಗುಂದ,ಕಣಕಿಕೊಪ್ಪ, 

                       OGCS : ಕೊಣ್ಣುರ, ಕಲಕೇರಿ  

ಶಿರಹಟ್ಟಿ OGCS : ರಣತೂರ 

ಲಕ್ಷ್ಮೇಶ್ವರ :OGCS : ಶಿಗ್ಲಿ 

ರೋಣ OGCS: ಅಬ್ಬಿಗೇರಿ, 

ಗಜೇಂದ್ರಗಡ          :  OGCS   ನಿಡಗುಂದಿ, 

ಮುಂಡರಗಿ            : OGCS  ಬರದೂರ, ಪೇಠಲೂರ,ಕಲಕೇರಿ 

 ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ,  ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.    


**********