ಗದಗ

ಎಫ್‌.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ

ಎಫ್‌.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ




ಗದಗ  5 : 2026-27 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು  ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ಅವರು  ತಿಳಿಸಿದರು. 

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ 2026-27 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ  ಹೆಸರುಕಾಳು  ಖರೀದಿಸುವ ಕುರಿತು ಜಿಲ್ಲಾ ಟಾಸ್ಕ್‌ ಫೋರ್ಸ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

ಜಿಲ್ಲೆಯಲ್ಲಿ ತೆರೆಯಲಾಗುವ ಹೆಸರುಕಾಳು ಹುಟ್ಟುವಳಿ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್‌. ಎ ಕ್ಯೂ ಗುಣಮಟ್ಟ ಪರೀಶೀಲನೆಗೆ ಗ್ರೇಡರ್‌ಗಳನ್ನು ನೇಮಕ ಮಾಡಬೇಕು ಮತ್ತು ಅವರಿಗೆ ಎಫ್‌ಎಕ್ಯೂ ಗ್ರೇಡಿಂಗ್ ತರಬೇತಿ ನೀಡಬೇಕು. ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 20 ಕ್ವಿಂಟಾಲ್ ಹೆಸರುಕಾಳು ಖರೀದಿಸಬೇಕು.  ಬೆಂಬಲ ಬೆಲೆಯಲ್ಲಿ ಹೆಸರು ಕಾಳು  ಹುಟ್ಟುವಳಿ ಖರೀದಿಯ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು  ಜಿಲ್ಲಾಕಾರಿ ಸಿ.ಎನ್‌.ಶ್ರೀಧರ್ ಸೂಚಿಸಿದರು.   


ಸುದ್ದಿ ಓದಿ