ಜನತಾ ಕರ್ಫ್ಯೂ ಬೆಂಬಲಿಸಿ: ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾ 21, ದೇಶಾದ್ಯಂತ ಕೊರೋನಾ ವೈರಸ್ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಭಾನುವಾರ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ. ಈ ಸಂದಿಗ್ಧ ಪರಿಸ್ಥಿತಿಯನ್ನು ಎಲ್ಲರೂ ಒಟ್ಟಾಗಿ, ಧೈರ್ಯದಿಂದ ಎದುರಿಸೋಣ ಮತ್ತು ಭಾರತವನ್ನು ಕೊರೋನಾ ಮುಕ್ತ ರಾಷ್ಟ್ರವಾಗಿ ಮಾಡೋಣ ಎಂದು ತಿಳಿಸಿದ್ದಾರೆ. ನಾವು ಆರೋಗ್ಯವಾಗಿದ್ದರೆ ರಾಷ್ಟ್ರದ ಆರೋಗ್ಯ ಸರಿಯಿರಲಿದೆ. ಕೊರೋನಾ ವೈರಸ್ ಹರಡುವಿಕೆಯಿಂದ ಜನರನ್ನು ತಡೆಗಟ್ಟುವುದು ನಮ್ಮ ಕರ್ತವ್ಯ. ಈ ಹಂತದಲ್ಲಿ 'ಸಾಮಾಜಿಕ ಅಂತರ ' ತುಂಬಾ ಪ್ರಾಮುಖ್ಯ. ಆದ್ದರಿಂದ ಜನತಾ ಕರ್ಫ್ಯೂ ಬೆಂಬಲಿಸಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 