ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಬಲಿಗರ ಪ್ರತಿಭಟನೆ
ಬೆಳಗಾವಿ 06: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಬೆಳಗಾವಿ ತಾಲ್ಲೂಕಿನ ಬಡಸ್ ಕೆ.ಎಚ್. ಕ್ರಾಸ್ ಬಳಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟಕ್ಕೆ ಸೇರೆ್ಡಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇಂತಹ ನಾಯಕಿಗೆ ಸಚಿವ ಸ್ಥಾನ ನೀಡದಿರುವುದು ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಅವರು ಹೇಳಿದರು.
ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ರಾಜಕೀಯ ಹಾಗೂ ಸಂಘಟನಾ ಸಾಮರ್ಥ್ಯವನ್ನು ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮನ್ಸೂರ್ ಅಲಿ ಅತ್ತಾರ್, ಅಶೋಕ್ ಅಂಗಡಿ, ಪರ್ವತಗೌಡ ಪಾಟೀಲ್, ರವಿ ಮೇಲೇದ್, ಪ್ರಕಾಶ್ ಪಾಟೀಲ್, ಬಸವಂತ ನಾಯಕ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಭಾಗವಹಿಸಿದ್ದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅವರ ರಾಜಕೀಯ ಮತ್ತು ಸಂಘಟನಾ ಸಾಮರ್ಥ್ಯಕ್ಕೆ ಸೂಕ್ತ ಗೌರವ ನೀಡಬೇಕು. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.