ಮತದಾರರ ಪಟ್ಟಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಅನುಮತಿ
Supreme Court allows revision of voter list
ನವದೆಹಲಿ 10: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಸ್ಪೆಷಲ್ ಇಂಟೆನ್ಸಿವ್ ರಿವಿಜನ್) ಮಾಡುವುದನ್ನು ಮುಂದುವರಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ವಿಚಾರಣೆ ನಡೆಸಿತು.
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ನ್ಯಾಯದ ಹಿತದೃಷ್ಟಿಯಿಂದ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿ ಮುಂತಾದ ದಾಖಲೆಗಳನ್ನು ಪರಿಗಣಿಸಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಇದಕ್ಕೂ ಮುನ್ನ ಮತದಾರರ ಪಟ್ಟಿಯ ಪರಿಷ್ಕರಣೆಗೆ ಆಧಾರ್ ಕಾರ್ಡ್ ಅನ್ನು ಏಕೆ ಪರಿಗಣಿಸುತ್ತಿಲ್ಲ ಎಂದು ನ್ಯಾಯಪೀಠ ಚುನಾವಣಾ ಆಯೋಗವನ್ನು ಪ್ರಶ್ನಿಸಿತ್ತು.
ಈ ಕುರಿತು ಚುನಾವಣಾ ಆಯೋಗದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ‘ಆಧಾರ್ ಕಾರ್ಡ್ ಅನ್ನು ಪೌರತ್ವಕ್ಕೆ ಪುರಾವೆಯಾಗಿ ಪರಿಗಣಿಸುತ್ತಿಲ್ಲ. ಹಾಗೆಯೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಆಕ್ಷೇಪಣೆ ಹೊಂದಿರುವುದಾಗಿ ತಿಳಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 