ರಾಷ್ಟ್ರೀಯ

ಕೋವಿಡ್‌ ಪ್ರಕರಣಗಳ ಏರಿಕೆಗೆ ಸುಪ್ರೀಂ ಕಳವಳ- ವರದಿ ಸಲ್ಲಿಸಲು ಎಲ್ಲಾ ರಾಜ್ಯಗಳಿಗೆ ಸೂಚನೆ

ಕೋವಿಡ್‌ ಪ್ರಕರಣಗಳ ಏರಿಕೆಗೆ ಸುಪ್ರೀಂ ಕಳವಳ- ವರದಿ ಸಲ್ಲಿಸಲು ಎಲ್ಲಾ ರಾಜ್ಯಗಳಿಗೆ ಸೂಚನೆ

ನವದೆಹಲಿ, ನವೆಂಬರ್ 23: ದೆಹಲಿ ಸೇರಿದಂತೆ ಇತರ ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳ ಏರಿಕೆ ಕುರಿತು ಆತಂಕ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌, ಮುಂದಿನ ಎರಡು ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.

ಈ ಸಂಬಂಧ ದಾಖಲಿಸಿಕೊಳ್ಳಲಾಗಿದ್ದ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಭೂಷಣ್‌, ಆರ್‌.ಸುಭಾಷ್‌ ರೆಡ್ಡಿ ಮತ್ತು ಎಂ.ಪಿ.ಶಾ ಅವರಿದ್ದ ತ್ರಿಸದಸ್ಯ ಪೀಠ, ದೇಶದಲ್ಲಿ ಕೋವಿಡ್‌ ಪ್ರಕರಣಗಳು ಭಾರಿ  ಏರಿಕೆ ಕಾಣುತ್ತಿವೆ ಮತ್ತು ರಾಷ್ಟ್ರಿಯ ರಾಜಧಾನಿಯಲ್ಲಿ ಕಳೆದ ಎರಡು ದಿನಗಳಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳು ಸೋಂಕು ಹರಡದಂತೆ ತಡೆಯಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಪ್ರಗತಿ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ವಿಚಾರಣೆ ವೇಳೆ ನ್ಯಾಯಪೀಠ, ಸೋಂಕು ತಡೆಗಟ್ಟಲು ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡಲು ದೆಹಲಿ ಸರ್ಕಾರದ ಕ್ರಮಗಳ ವಿವರ ಕೇಳಿತು.

ಸುದ್ದಿ ಓದಿ