ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ನಿಂದ ’ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್ ಆಯೋಜನೆ: ಅನು ಶಿವರಾಮನ
Supreme Court to organize 'Samadhan Samaroh' special Lok Adalat in August: Anu Shivaramana
ಬಳ್ಳಾರಿ 30: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ, ಬರುವ ಆಗಸ್ಟ್ 21, 22 ಮತ್ತು 23 ರಂದು ’ಸಮಾಧಾನ ಸಮಾರೋಹ್’ ಎಂಬ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಹಾಗೂ ಕೆಎಎಲ್‌ಎಸ್‌ಎ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಶಿವರಾಮನ್ ಅವರು ಹೇಳಿದರು. ’ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್ ಕುರಿತು, ಆನ್ ಲೈನ್ ಮೂಲಕ ಕರ್ನಾಟಕ ಹೈಕೋರ್ಟ್ ನ ಮೊದಲ ಮಹಡಿಯಲ್ಲಿರುವ ಕಾರ್ಯನಿರ್ವಾಹಕ ಅಧ್ಯಕ್ಷರ ಸಭಾಂಗಣದಲ್ಲಿ ಗುರುವಾರ ಏರಿ್ಡಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸುಪ್ರೀಂ ಕೋರ್ಟ್ ಪ್ರಕರಣಗಳ ಇತ್ಯರ್ಥಕ್ಕೆ ಇದು ವಿಶೇಷ ಲೋಕ್ ಅದಾಲತ್ ಆಗಿದೆ. ಸಾರ್ವಜನಿಕರಿಗೆ ಇದು ಸುವರ್ಣಾವಕಾಶವಾಗಿದ್ದು, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ದಾವೆಗಳನ್ನು ಪರಸ್ಪರ ಒಪ್ಪಿಗೆ ಮತ್ತು ಸಂಧಾನದ ಮೂಲಕ ಬಗೆಹರಿಸಿ, ದಾವೆದಾರರಿಗೆ ಶೀಘ್ರ ನ್ಯಾಯ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಆರ್.ದೇವದಾಸ್ ಅವರು ಮಾತನಾಡಿ, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿರುವ ಸಾವಿರಾರು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ’ವಿಶೇಷ ಲೋಕ್ ಅದಾಲತ್’ ಎಂಬ ವಿನೂತನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿಂದೆ ಎಂದೂ ನಡೆಯದ ಈ ವಿಶೇಷ ಕಾರ್ಯಕ್ರಮದ ಮೂಲಕ ಜನಸಾಮಾನ್ಯರಿಗೆ ತಮ್ಮ ಕಾನೂನು ಹೋರಾಟವನ್ನು ಸುಲಭವಾಗಿ ಮುಕ್ತಾಯಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.*ರಾಜ್ಯದ 4,328 ಪ್ರಕರಣಗಳ ಗುರುತಿಸುವಿಕೆ:*ಕರ್ನಾಟಕ ರಾಜ್ಯದ ವಿವಿಧ ತಾಲೂಕು ಮತ್ತು ಜಿಲ್ಲಾ ಮಟ್ಟಗಳಿಂದ ಸುಪ್ರೀಂ ಕೋರ್ಟ್ಗ ಹೋದ ಸುಮಾರು 4,328 ಪ್ರಕರಣಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ ಗುರುತಿಸಿ, ಪಟ್ಟಿಯನ್ನು ಕಳುಹಿಸಿಕೊಟ್ಟಿದೆ. ರಾಜಿ ಸಂಧಾನದ ಮೂಲಕ ಬಗೆಹರಿಸಬಹುದಾದ ಪ್ರಕರಣಗಳನ್ನು ಗುರುತಿಸಿ, ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವುದು ಈ ಲೋಕ್ ಅದಾಲತ್ನ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು.
ವರ್ಷಾನುಗಟ್ಟಲೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುವ ಕಾನೂನು ಪ್ರಕ್ರಿಯೆಗಳು ಜನರಿಗೆ ಹೊರೆಯಾಗಬಹುದು. ಈ ಲೋಕ್ ಅದಾಲತ್ ಮೂಲಕ ಪರಸ್ಪರ ಒಪ್ಪಿಗೆಯ ಮೇರೆಗೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಸಮಯ ಮತ್ತು ಹಣ ಎರಡೂ ಉಳಿತಾಯವಾಗಲಿದೆ. ತಮ್ಮ ಪ್ರಕರಣಗಳು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವವರು ಕೂಡಲೇ ಸಂಬಂಧಪಟ್ಟ ತಾಲ್ಲೂಕು ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಗೆ ಸಂಪರ್ಕಿಸಿ ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬೇಕೆಂದು ವಿನಂತಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ 