ದೇಶ ಕಂಡ ಅಪ್ರತಿಮ ಮಹಿಳಾ ರಾಜಕಾರಣಿಗಳಲ್ಲಿ ಸುಷ್ಮಾ ಸ್ವರಾಜ್ ಕೂಡ ಒಬ್ಬರು: ಸದಾನಂದ ಗೌಡ
ಬೆಂಗಳೂರು, ಆ 7 ದೇಶ ಕಂಡ ಪ್ರತಿಭಾವಂತ ಮಹಿಳಾ ರಾಜಕಾರಣಿಗಳಲ್ಲಿ ಸುಷ್ಮಾ ಸ್ವರಾಜ್ ಹೆಸರು ಅಗ್ರ ಸ್ಥಾನದಲ್ಲಿದೆ ಅವರ ವಾಕ್ ಚಾತುರ್ಯ ವಿಚಾರ ವಿಮರ್ಶಿ ಬುದ್ದಿವಂತಿಕೆ ದೈವ ಭಕ್ತಿ ಸರಳ ಜೀವನ ಎಲ್ಲವೂ ಅನುಕರಣೀಯ ಎಂದು ಅವರ ಅಗಲಿಕೆಯ ನೋವಿನ ನಡುವೆಯೂ ಕೇಂದ್ರ ಕೇಂದ್ರ ರಾಸಾಯನಿಕ ಮತ್ತು ರಸ ಗೊಬ್ಬರ ಸಚಿವ ಡಿ.ಎಸ್ ಸದಾನಂದಗೌಡರು ಶ್ಲಾಘಿಸಿದ್ದಾರೆ.
ರಾಜಕೀಯವಾಗಿ ಅನೇಕ ಸ್ಥಾನಮಾನ ಪಡೆದ ಅವರು ವಿದೇಶಾಂಗ ಸಚಿವೆಯಾಗಿ ಸಲ್ಲಿಸಿದ ಸೇವೆ ಜನ ಮಾನಸದಲ್ಲಿ ಸ್ಥಿರ ಸ್ಥಾಯಿಯಾಗಿ ನಿಲ್ಲುವಂತದ್ದು. ನನ್ನ ರಾಜಕೀಯ ಜೀವನದಲ್ಲಿ ಅವರನ್ನು ತುಂಬಾ ಸಮೀಪದಿಂದ ಬಲ್ಲೆ. ತಾವು ನಂಬಿಕೊಂಡಿದ್ದ ಸಿದ್ಧಾಂತದಲ್ಲಿ ಎಂದಿಗೂ ರಾಜಿ ಮಾಡಿ ಕೊಂಡವರಲ್ಲ ಎಂದರು.
ಸಾಮಾನ್ಯರ ಸಂಕಷ್ಟಕ್ಕೆ ಅವರು ಸ್ಪಂದಿಸುತ್ತಿದ್ದ ರೀತಿ, ಭಾರತದಿಂದ ತನಗರಿವಿಲ್ಲದೆ ಪಾಕಿಸ್ತಾನ ಕ್ಕೆ ಹೋಗಿ ಸೇರಿದ್ದ ಕಿವುಡ ಮತ್ತು ಮೂಕಿ ಬಾಲಕಿ ಗೀತಾಳನ್ನು ಮತ್ತೆ ನಮ್ಮ ದೇಶಕ್ಕೆ ಕರೆ ತರುವಲ್ಲಿ ತೋರಿಸಿದ ಮಾತೃ ಹೃದಯ, ಎಲ್ಲವೂ ನೆನಪಿನಂಗಳದಲ್ಲಿ ಶಾಶ್ವತವಾಗಿ ಉಳಿಯಲಿವೆ ಎಂದು ಹೇಳಿದರು.
ದೇಶ ಕಂಡ ತುರ್ತ ಪರಿಸ್ಥಿತಿಯಲ್ಲಿ ಅವರು ಸಿಡಿದ್ದೆದ್ದ ರೀತಿ, ತಮ್ಮ ಕಿರಿ ವಯಸ್ಸಿನಲ್ಲೇ ಹರಿಯಾಣದ ಸಂಪುಟ ದರ್ಜ
ಸಚಿವರಾಗಿ, ಬಿಜೆಪಿ ಮಹಿಳಾ ವಕ್ತಾರರಾಗಿ, ದೆಹಲಿಯ ಮುಖ್ಯಮಂತ್ರಿಯಾಗಿ ಎಲ್ಲವೂ ಸಾಧನೆಯ ಪುಟಗಳಲ್ಲಿ ಸೇರಬೇಕಾದವು ಎಂದು ತಿಳಿಸಿದರು.
ಈಗ ಮತ್ತೊಮ್ಮೆ ಅನಂತ್ ಕುಮಾರ್ ನೆನಪಾಗುತ್ತಿದ್ದಾರೆ. ಸುಷ್ಮಾರವರನ್ನು ಕರ್ನಾಟಕ ರಾಜಕೀಯಕ್ಕೆ ಕರೆತರುವಲ್ಲಿ ತೋರಿಸಿದ ಆಸ್ಥೆ ಅವರನ್ನು ಕನ್ನಡಿಗರ ಇನ್ನಷ್ಟು ಹತ್ತಿರ ಬರುವಂತೆ ಮಾಡಿತು . ನಮ್ಮೆಲ್ಲರ ಸಹೋದರಿಯಾಗಿ ಚಿರಕಾಲ ನಿಲ್ಲುವಂತೆ ಆಯಿತು. ಅಮ್ಮಾ ನಿಮ್ಮ ದೇಹ ಇಲ್ಲಿ ಇಲ್ಲದೇ ಇರಬಹುದು. ಆದರೆ, ನೀವು ಬಿಟ್ಟು ಹೋದ ಆದರ್ಶಗಳು ಮುಂದಿನ ಪೀಳಿಗೆಯ ಜನತೆಗೆ ದಾರಿದೀಪ ಎಂದು ಸದಾನಂದಗೌಡ ಭಾವುಕರಾದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 