ರಾಷ್ಟ್ರೀಯ

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ : ಶಿರಸಿ ಯುವಕ ಎಎನ್ಐ ವಶಕ್ಕೆ

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ : ಶಿರಸಿ ಯುವಕ ಎಎನ್ಐ ವಶಕ್ಕೆ

ಶಿರಸಿ, ನವೆಂಬರ್.11: ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ.

ಸಯ್ಯದ್ ಇದ್ರಿಸ್ ಸಾಬ್ ಮುನ್ನಾ  ಬಂಧಿತ ಆರೋಪಿ. ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪಶ್ಚಿಮ ಬಂಗಾಳ ವಿಭಾಗದ ತಂಡ ಬುಧವಾರ ನಸುಕಿನ ಜಾವ ಯುವಕನನ್ನು ಬಂಧಿಸಿ, ವಿಚಾರಣೆಗೆ ಕರೆದೊಯ್ದಿದೆ.

ಬಂಧಿತ ಸಯ್ಯದ್, ಗ್ರಾಮ ಪಂಚಾಯತಿ ಮಾಜಿ ಸದಸ್ಯರೊಬ್ಬರ ಪುತ್ರ ಎಂದು ತಿಳಿದು ಬಂದಿದೆ.

ಸಯ್ಯದ್, ಪಾಕಿಸ್ತಾನದಿಂದ ಕಾರ್ಯಾಚರಣೆ ಮಾಡುತ್ತಿರುವ ಉಗ್ರ ಸಂಘಟನೆಯೊಂದರ ಸದಸ್ಯರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದ. ನಿರಂತರ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಎಂಬ ಆರೋಪವಿದೆ.

ಹೀಗಾಗಿ ಈಗಾಗಲೇ ಎನ್ಐಎ ಅಧಿಕಾರಿಗಳು ಕಳೆದ ತಿಂಗಳು ಎರಡು ಬಾರಿ ಯುವಕನ ವಿಚಾರಣೆಗೆ ಒಳಪಡಿಸಿದ್ದರು. ನಂಟು ಹೊಂದಿರುವುದು ಖಾತರಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಶಿರಸಿಗೆ ಆಗಮಿಸಿದ್ದ ಎನ್ಐಎ ತಂಡ ಯುವಕನನ್ನು ಬಂಧಿಸಿ ಬುಧವಾರ ನಸುಕಿನ ಜಾವ ಕರೆದೊಯ್ದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಸುದ್ದಿ ಓದಿ