ಸಾಣಿಕೊಪ್ಪ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಬೈಲಹೊಂಗಲ 05: ತಾಲೂಕಿನ ಸಾಣಿಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.
ತಾಲೂಕಾ ಯೋಜನಾಧಿಕಾರಿ ಪಿ. ವಿಜಯಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸದೃಢ ಸಮಾಜಕ್ಕೆ ಧರ್ಮಸ್ಥಳ ಯೋಜನೆ ಶಿಕ್ಷಣ ರಂಗಕ್ಕೆ ಕೊಡುವ ಸೌಲಭ್ಯಗಳ ಬಗ್ಗೆ ತಿಳಿಸಿದರು, ನಂತರ ಸಂಪನ್ಮೂಲ ವ್ಯಕ್ತಿ ಡಾ. ಕಿರಣ್ ಮೂಡಲಗಿ ಮಕ್ಕಳಿಗೆ ವಿದ್ಯಾರ್ಥಿ ಜೀವನದಲ್ಲಿ ಸದೃಢರಾಗಿ ದುಶ್ಚಟಗಳಿಂದ ದೂರವಾಗಿ ಉತ್ತಮ ನಾಗರಿಕರಾಗಬೇಕೆಂದು ಸಲಹೆ ನೀಡಿದರು.
ಮುಖ್ಯೋಪಾಧ್ಯಾಯ ಎಂ.ವಾಯ್.ತಳವಾರ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ವೈದ್ಯ ಪಿ.ಸಿ. ಛಲವಾದಿ, ಸೇವಾ ಪ್ರತಿನಿಧಿ ಮೆಹಮೂನ್, ವಿ.ಎಲ್. ಅರುಣ್, ಶಾಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಜರಿದ್ದರು.