ಕಾರವಾರ

ಸ್ವೀಪ್ ಕಾರ್ಯಕ್ರಮದ ಪ್ರಗತಿ ಪರೀಶೀಲನಾ ಸಭೆ

ಸ್ವೀಪ್ ಕಾರ್ಯಕ್ರಮದ ಪ್ರಗತಿ ಪರೀಶೀಲನಾ ಸಭೆ

ಲೋಕದರ್ಶನ ವರದಿ 

ಕಾರವಾರ  17 : ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ದೀಲೀಷ್ ಶಶಿ ಅವರ ಅಧ್ಯಕ್ಷತೆಯಲ್ಲಿ ವೀಡಿಯೋ ಸಂವಾದದ ಮೂಲಕ "ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ " ಸಂಬಂಧಿಸಿದಂತೆ ಸ್ವೀಪ್ ಕಾರ್ಯಕ್ರಮದ ಪ್ರಗತಿ ಪರೀಶೀಲನಾ ಹಾಗೂ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ವಿವಿಧ ಯೋಜನಾಧಿಕಾರಿಗಳು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಸ್ವೀಪ್ ಸಮಿತಿಯ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಗಳು ಹಾಗೂ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. 


ಸುದ್ದಿ ಓದಿ