ವಿವಿಧ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನಾ ಮೆರವಣಿಗೆ | ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಬೆಳಗಾವಿಯಲ್ಲಿ ಭಾರತ ಬಂದ್ಗೆ ಸಿಗದ ಬೆಂಬಲ
ಬೆಳಗಾವಿ : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಗೂ ಕೇಂದ್ರ ಸಕರ್ಾರದ ಆಥರ್ಿಕ ನೀತಿ ವಿರೋಧಿ ದೇಶ ವ್ಯಾಪ್ತಿ ವಿವಿಧ ಕಾಮರ್ಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಭಾರತ ಬಂದ್ಗೆ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಕಾಮರ್ಿಕ ಸಂಘಟನೆಗಳ ಪ್ರತಿಭಟನಾ ಮೆರವಣಿಗೆ ಹೊರತು ಪಡಿಸಿದರೆ ಜಿಲ್ಲೆಯಲ್ಲಿ ಬಂದ್ಗೆ ಪ್ರತಿಕ್ರಿಯೆ ದೊರೆಯಲಿಲ್ಲ.
ಬೆಳಗಾವಿ ನಗರದಲ್ಲಿ ಕೇಂದ್ರ ಕಾಮರ್ಿಕ ಸಂಘಗಳ ಜಂಟಿ ಸಮಿತಿ, ಸಿಐಟಿಯು, ಎಐಟಿಯುಸಿ, ಅಂಗನವಾಡಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ ಸೇರಿದಂತೆ 8ಕ್ಕೂ ಹೆಚ್ಚು ಕಾಮರ್ೀಕ ಸಂಘಟನೆಗಳು ಭಾರತ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾಂಕೇತಿಕವಾಗಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆಯನ್ನು ಹೊರಡಿಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿಯೊಂದನ್ನು ಸಲ್ಲಿಸಿದವು.
ಭಾರತ ಬಂದ್ ಹಿನ್ನೆಲೆಯಲ್ಲಿ ನಡೆದ ಈ ಪ್ರತಿಭಟನಾ ರ್ಯಾಲಿಯೂ ನಗರದ ಧರ್ಮವೀರ್ ಸಂಭಾಜಿ ವೃತ್ತದಿಂದ ಆರಂಭವಾಗಿ ಕಾಲೇಜ್ ರಸ್ತೆ, ರಾಣಿ ಚನ್ನಮ್ಮಾ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ವರೆಗೆ ಸಾಗಿತು. ಈ ವೇಳೆ ಕೇಂದ್ರ ಸಕರ್ಾರ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ವೇತನ ಸಂಹಿತೆ, ವೃತ್ತಿ ಆರೋಗ್ಯ, ಸುರಕ್ಷತೆ ಮತ್ತು ಕೆಲಸ ಪರಿಸ್ಥಿತಿ ಸಂಹಿತೆಗಳ 44 ಕಾಮರ್ಿಕ ಕಾನೂನುಗಳನ್ನು ತೆಗೆದು ಹಾಕಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕಾಮರ್ೀಕ ಸಂಘಟನೆಗಳು ಭಾರತ ಬಂದ್ ಕರೆ ನೀಡಿದ್ದರು ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಸ್ ಸಂಚಾರ ಎಂದಿನಂತೆ ಸಾಗಿತ್ತು. ಅಲ್ಲದೆ ಅಂಗಡಿ ಮುಂಗಟ್ಟುಗಳು ಎಂದಿನಂತೆ ತಮ್ಮ ಕಾರ್ಯವನ್ನು ಪ್ರಾರಂಭಿಸಿದ್ದವು. ಬಂದ್ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಮಾತ್ರ ಅಲ್ಪಮಟ್ಟಿಗೆ ಇಳಿಮುಖವಾಗಿತ್ತು.