ಸಿಂಡಿಕೇಟ್ ಬ್ಯಾಂಕ್ ಶತಮಾನೋತ್ಸವ ಸಂಭ್ರಮ
Syndicate Bank Centenary Celebrations
ಲೋಕದರ್ಶನ ವರದಿ
ಬೆಳಗಾವಿ 25: ಕೆನರಾ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸಿಬ್ಬಂದಿ ಸಂಘದ ವತಿಯಿಂದ ನಗರದ ನ್ಯೂ ಉದಯ ಭವನದಲ್ಲಿ ಸಿಂಡಿಕೇಟ್ ಬ್ಯಾಂಕ್ ಶತಮಾನೋತ್ಸವ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸಿಬ್ಬಂದಿ ಸಂಘದ ಅಧ್ಯಕ್ಷ ಹೇಮಂತ್ ಪೈ, ಸಿಂಡಿಕೇಟ್ ಬ್ಯಾಂಕ್ ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶಿಷ್ಟ ಸೇವಾ ಪರಂಪರೆಯನ್ನು ನಿರ್ಮಿಸಿದ್ದು, ಸಮಾಜದ ವಿವಿಧ ವರ್ಗಗಳ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು.
ಸಿಂಡಿಕೇಟ್ ಬ್ಯಾಂಕ್ ಅನ್ನು ಉದ್ಯಮಿಗಳಾದ ವಿ.ಎಸ್. ಕುದ್ವ, ಉದ್ಯಮಿ ಟಿ. ಉಪೇಂದ್ರ ಪೈ ಹಾಗೂ ಡಾ. ಟಿ.ಎಂ.ಎ. ಪೈ ಅವರು 8 ಸಾವಿರ ಬಂಡವಾಳದೊಂದಿಗೆ ಸ್ಥಾಪಿಸಿ ದೇಶದಾದ್ಯಂತ ಉತ್ತಮ ಸೇವೆ ನೀಡಿದರು. ಬ್ಯಾಂಕ್ ಪರಿಚಯಿಸಿದ ಪಿಗ್ಮಿ ಠೇವಣಿ ಯೋಜನೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಮನಾರ್ಹ ಪ್ರಯೋಗವಾಗಿತ್ತು. ಸಿಬ್ಬಂದಿ ಮನೆಮನೆಗೆ ತೆರಳಿ ಸಣ್ಣ ಮೊತ್ತದ ಉಳಿತಾಯ ಸಂಗ್ರಹಿಸುವ ಮೂಲಕ ಜನರಲ್ಲಿ ಉಳಿತಾಯದ ಮನೋಭಾವ ಬೆಳೆಸಲು ನೆರವಾದರು. ಕೃಷಿ ಕ್ಷೇತ್ರಕ್ಕೆ ಸಾಲ ಸೌಲಭ್ಯ ಸೇರಿದಂತೆ ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸುವ ಹಲವು ಯೋಜನೆಗಳನ್ನು ಬ್ಯಾಂಕ್ ಜಾರಿಗೊಳಿಸಿತ್ತು ಎಂದು ಅವರು ವಿವರಿಸಿದರು.
ಸಾರ್ವಜನಿಕ ಆರೋಗ್ಯ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಬ್ಯಾಂಕಿನ ಸೇವಾ ಪರಂಪರೆಯನ್ನು ಸ್ಮರಿಸಿ ನಿವೃತ್ತ ಸಿಬ್ಬಂದಿ, ಅಧಿಕಾರಿಗಳು ಹಾಗೂ ಹಳೆಯ ಸಹೋದ್ಯೋಗಿಗಳು ಒಟ್ಟಾಗಿ ಶತಮಾನೋತ್ಸವ ಆಚರಿಸುತ್ತಿರುವುದು ಸಂತಸದ ಸಂಗತಿ ಎಂದು ಹೇಮಂತ್ ಪೈ ಹೇಳಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಶಾರದಾಚರಣ್ ಕುಲಕರ್ಣಿ, ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ಸಿಂಡಿಕೇಟ್ ಬ್ಯಾಂಕ್ ಹಾಗೂ ಅದರ ಸಿಬ್ಬಂದಿಯೊಂದಿಗೆ ಉತ್ತಮ ಆತ್ಮೀಯ ಸಂಬಂಧ ಹೊಂದಿದ್ದನ್ನು ಸ್ಮರಿಸಿದರು. ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯ ಸಹಕಾರವನ್ನು ಮೆಚ್ಚಿದ ಅವರು, ಬ್ಯಾಂಕ್ ಸ್ಥಾಪಿಸಿದ ಸಂಸ್ಥಾಪಕರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದರು. ಪಿ.ಆರ್. ಹಿರೇಮಠ್ ಮಾತನಾಡಿ, ಶಾರದಾಚರಣ್ ಸಿ. ಕುಲಕರ್ಣಿ ಕಾರ್ಯಕ್ರಮಕ್ಕೆ ಆಗಮಿಸಿರುವುದು ಸಂತಸ ತಂದಿದೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಬೆಳಗಾವಿಯಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ ಎಂದು ಶ್ಲಾಘಿಸಿದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 