ಟಿ. ಎನ್. ಶೇಷನ್ ನಿಧನಕ್ಕೆ ಸೋನಿಯಾ ಸಂತಾಪ
ನವದೆಹಲಿ, ನ 11: ನಿವೃತ್ತ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಟಿ. ಎನ್. ಶೇಷನ್ ಅವರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ತೀವ್ರ ಸಂತಾಪ ಸೂಚಿಸಿದ್ದಾರೆ. ದೇಶದ ಚುನಾವಣಾ ಆಯೋಗವನ್ನು ಬಲಿಷ್ಟಗೊಳಿಸಿದ ಹಾಗೂ ಚುನಾವಣಾ ವ್ಯವಸ್ಥೆಯಲ್ಲಿ ಹಲವು ಮಹತ್ವದ ಸುಧಾರಣೆಜಾರಿಗೊಳಿಸಿ ಪ್ರವರ್ತಕರೆನಿಸಿದ್ದ ಶೇಷನ್ ಅವರನ್ನು ದೇಶ ಸದಾ ಸ್ಮರಿಸಲಿದೆ ಎಂದು ಸೋನಿಯಾ ಗಾಂಧಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಶೇಷನ್ ಅತ್ಯುತ್ತಮ ನಾಗರೀಕ ಸೇವೆಗಳ ಅಧಿಕಾರಿಯೂ ಆಗಿದ್ದರು, ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿಯೂ ಅವರು ಮಹತ್ವದ ಸೇವೆ ಸಲ್ಲಿಸಿದ್ದರು ಎಂದು ಸೋನಿಯಾ ಗಾಂಧಿ ಸ್ಮರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 