ಟಿ-20, ಟೆಸ್ಟ್ ಮ್ಯಾಚ್ ಗೆ ಟೀಂ ಇಂಡಿಯಾ ಪ್ರಕಟ; ಟಿ-20 ಯಲ್ಲಿ ಸ್ಥಾನ ಪಡೆದ ಉಮ್ರಾನ್ ಮಲಿಕ್
ನವದೆಹಲಿ: ಮೇ 22: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಮತ್ತು ದಕ್ಷಿಣಾ ಆಫ್ರಿಕಾ ವಿರುದ್ಧದ ಟಿ- 20 ಪಂದ್ಯಕ್ಕೆ ಭಾರತ ತಂಡ ಪ್ರಕಟವಾಗಿದೆ.
ಚೇತೇಶ್ವರ ಪೂಜಾರ ಭಾರತದ ಟೆಸ್ಟ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಪ್ರಸ್ತುತ ಐಪಿಎಲ್ ನಲ್ಲಿ ವೇಗದ ಬೌಲರ್ ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್ ಅವರಂತಹ ಯುವ ಆಟಗಾರರು ಟಿ- 20 ಪಂದ್ಯ ಸೇರಿಕೊಂಡಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿಯು ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಐದು ಪಂದ್ಯಗಳ ಟಿ 20 ಸರಣಿಗೆ ತಂಡಗಳನ್ನು ಹೆಸರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜೂನ್ 9 ರಿಂದ ಟಿ- 20 ಪಂದ್ಯಗಳು ಆರಂಭವಾಗುತ್ತವೆ. ಇಂಗ್ಲೆಂಡ್ ವಿರುದ್ಧದ ಮರುನಿಗದಿಪಡಿಸಲಾದ 5 ನೇ ಟೆಸ್ಟ್, ಜುಲೈ ಮೊದಲ ವಾರದಲ್ಲಿ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿದೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ಟಿ 20 ಪಂದ್ಯಗಳಲ್ಲಿ ವಿಶ್ರಾಂತಿ ನೀಡಲಾಗಿದೆ. ಪ್ರಸ್ತುತ ಐಪಿಎಲ್ 2022 ರಲ್ಲಿ ಪ್ರಭಾವ ಬೀರಿದ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದು ವೇಗಿ ಉಮ್ರಾನ್ ಮಲಿಕ್ ಚೊಚ್ಚಲ ಪಂದ್ಯವಾಡಲಿದ್ದಾರೆ.
ಅನುಭವಿ ವಿಕೆಟ್ಕೀಪರ್ ದಿನೇಶ್ ಕಾರ್ತಿಕ್ ಕೂಡ ಈ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೆಲವು ಪ್ರಬಲ ಪ್ರದರ್ಶನಗಳ ಹಿನ್ನೆಲೆಯಲ್ಲಿ ತಂಡಕ್ಕೆ ಮರಳಿದ್ದಾರೆ. ಪ್ರಸ್ತುತ ಐಪಿಎಲ್ ಸೀಸನ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಕೂಡ ತಂಡಕ್ಕೆ ಮರಳಿದ್ದಾರೆ. ಹಾರ್ದಿಕ್ ಕೊನೆಯದಾಗಿ 2021ರಲ್ಲಿ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಭಾರತ ಪರ ಆಡಿದ್ದರು. ಯುಜ್ವೇಂದ್ರ ಚಾಹಲ್ ಮತ್ತು ಕುಲ್ದೀಪ್ ಯಾದವ್ ಪ್ರಸ್ತುತ ಐಪಿಎಲ್ ಋತುವಿನಲ್ಲಿ ಪ್ರಮುಖ ವಿಕೆಟ್ ಟೇಕರ್ ಗಳಲ್ಲಿದ್ದಾರೆ ಮತ್ತು ಆದ್ದರಿಂದ ಈ ಜೋಡಿಯನ್ನು ತಂಡದಲ್ಲಿಯೂ ಹೆಸರಿಸಲಾಗಿದೆ. ಹರ್ಷಲ್ ಪಟೇಲ್ ಮತ್ತು ಭುವನೇಶ್ವರ್ ಕುಮಾರ್ ಕೂಡ ತಂಡದಲ್ಲಿದ್ದಾರೆ. ಪಂಜಾಬ್ ಕಿಂಗ್ಸ್ ಸೀಮರ್ ಅರ್ಷದೀಪ್ ಸಿಂಗ್ ಅವರು ಪ್ರಬಲ ಪ್ರದರ್ಶನ ನೀಡಿದ್ದು, ರಾಷ್ಟ್ರೀಯ ತಂಡ ಸೇರಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಪಂದ್ಯಕ್ಕೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್) , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.
ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಗೆ ಭಾರತ ತಂಡ – ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ