ಗದಗ ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕರಾಗಿ ಟಿ.ಎಂ. ದೇವರಮಣಿ ಅಧಿಕಾರ ಸ್ವೀಕಾರ
T.M. Devaramani assumes charge as Deputy Director of the Gadag District Treasury Department
ಗದಗ, ಜು.21: ರಾಜ್ಯ ಸರ್ಕಾರದ ಆದೇಶದಂತೆ ಗದಗ ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕರಾಗಿ ಟಿ.ಎಂ. ದೇವರಮಣಿ ಅವರು ಅಧಿಕಾರ ಸ್ವೀಕರಿಸಿದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಖಜಾನೆ ಕಚೇರಿಯಲ್ಲಿ ಮಂಗಳವಾರ ಆತ್ಮೀಯ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ನೂತನ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ದೇವರಮಣಿ ಅವರನ್ನು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅವರ ಆಡಳಿತಾತ್ಮಕ ಅನುಭವ ಹಾಗೂ ಸೇವಾ ಮನೋಭಾವವನ್ನು ಶ್ಲಾಘಿಸಿದ ಅಧಿಕಾರಿಗಳು, ಅವರ ನೇತೃತ್ವದಲ್ಲಿ ಇಲಾಖೆಯ ಕಾರ್ಯನಿರ್ವಹಣೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಟಿ.ಎಂ. ದೇವರಮಣಿ, ಸರ್ಕಾರದ ನಿಯಮಾನುಸಾರ ಪಾರದರ್ಶಕ, ಜವಾಬ್ದಾರಿಯುತ ಹಾಗೂ ಜನಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು. ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದೊಂದಿಗೆ ಖಜಾನೆ ಇಲಾಖೆಯ ಕಾರ್ಯಗಳನ್ನು ಇನ್ನಷ್ಟು ಸುಗಮವಾಗಿ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣು ಗೊಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ್ ವಿಭೂತಿ, ಶಿವಕುಮಾರ ಕುರಿ, ಎಂ.ಎಚ್. ಕಂಬಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ನೂತನ ಉಪನಿರ್ದೇಶಕರಿಗೆ ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 