ಟಿ-20 ಸರಣಿ: ಭಾರತ ವನಿತೆಯರಿಗೆ ಜಯ
ನವದೆಹಲಿ, ನ.18 : ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಭಾರತ ಮಹಿಳಾ ತಂಡ ನಾಲ್ಕನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಆತಿಥೇಯ ತಂಡವನ್ನು 5 ರನ್ ಗಳಿಂದ ಮಣಿಸಿ, ಸರಣಿಯಲ್ಲಿ 4-0 ಯಿಂದ ಮುನ್ನಡೆ ಸಾಧಿಸಿದೆ. ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದರಿಂದ 20 ಓವರ್ ಗಳ ಪಂದ್ಯವನ್ನು 9 ಓವರ್ ಗಳಿಗೆ ಇಳಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಭಾರತ 9 ಓವರ್ ಗಳಲ್ಲಿ 7 ವಿಕೆಟ್ ಗೆ 50 ರನ್ ಸೇರಿಸಿತು. ಭಾರತ ತಂಡದ ಸ್ಟಾರ್ ಆಟಗಾರ್ತಿಯರು ರನ್ ಕಲೆ ಹಾಕುವಲ್ಲಿ ವಿಫಲರಾದರು. ವೇದಾ ಕೃಷ್ಣಮೂತರ್ಿ (5), ಜಾಮೀಮ ರೋಡ್ರಿಗಸ್ (6), ಹರ್ಮನ್ ಪ್ರಿತ್ ಕೌರ್ (6), ದೀಪ್ತಿ ಶಮರ್ಾ (4) ರನ್ ಕಲೆ ಹಾಕುವಲ್ಲಿ ವಿಫಲರಾದರು. ವಿಂಡೀಸ್ ಪರ ಹಾಯ್ ಲೆ ಮ್ಯಾಥ್ಯೂಸ್ 3, ಫ್ಲೆಟ್ಚರ್, ಶೆನೆಟಾ ಗ್ರಿಮಂಡ್ ತಲಾ ಎರಡು ವಿಕೆಟ್ ಕಬಳಿಸಿದರು. ಗುರಿಯನ್ನು ಹಿಂಬಾಲಿಸಿದ ಮ್ಯಾಥ್ಯೂಸ್ (11), ಹೆನ್ರಿ (11) ರನ್ ಬಾರಿಸಿದರು. ಉಳಿದ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಂತಿಮವಾಗಿ ವಿಂಡೀಸ್ 9 ಓವರ್ ಗಳಲ್ಲಿ 5 ವಿಕೆಟ್ ಗೆ 45 ರನ್ ಸೇರಿಸಿತು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 