ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕ: ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
ಲೋಕದರ್ಶನ ವರದಿ
ಚಿಕ್ಕೋಡಿ 27: ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸನ್ 2023-24 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗಾಗಿ ಆದೇಶವಾಗಿದೆ. ಆಸಕ್ತ ಅಭ್ಯಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಗಣೇಶ ಹುಕ್ಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕೋಡಿ-ಸದಲಗಾ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ ಇಲಾಖೆಯಿಂದ ಸನ್ 2023 -24 ನೇ ಸಾಲಿನ ಶೈಕ್ಷಣಿಕ ಸಾಲಿಗಾಗಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಸಲಾಗಿದೆ. ಕಾರಣ, ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ವ್ಯಾಪ್ತಿಯಲ್ಲಿಯ ಆಯಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಹಂಚಿಕೆಯಾಗಿರುವ ಹುದ್ದೆಗಳಿಗನುಗುನವಾಗಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ತಾವು ಸೇವೆ ಸಲ್ಲಿಸಲು ಇಚ್ಚಿಸುವ ಶಾಲೆಗಳ ಮುಖ್ಯೋಪಾಧ್ಯಾರಿಗೆ ಅರ್ಜಿ ಸಲ್ಲಿಸಿ, ಒಂದು ಪ್ರತಿಯನ್ನು ಶಾಸಕ ಗಣೇಶ ಹುಕ್ಕೇರಿಯವರ ಯಕ್ಸಂಬಾದ ಅನ್ನಪೂಣೇಶ್ವರಿ ಪೆಟ್ರೋಲ್ ಪಂಪ ಹತ್ತಿರದ ಕಾರ್ಯಲಯಕ್ಕೆ ಅರ್ಜಿ ಸಲ್ಲಿಸಲು ಈ ಮೂಲಕ ಕೋರಲಾಗಿದೆ ಎಂದು ತಿಳಿಸಿದ್ದಾರೆ