ಸುಲ್ತಾನ್ ಪುರದಲ್ಲಿ ರಸ್ತೆ ಅಪಘಾತ: ಮೂವರು ಕಾರ್ಮಿಕರು ಸಾವು
ಸುಲ್ತಾನಪುರ, ಫೆ .15 ಜಿಲ್ಲೆಯ ಮೋತಿಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಡೆ ಬಾಬಾ ಬಜಾರ್ನಲ್ಲಿ ಶನಿವಾರ ಪ್ರಯಾಣಿಕರ ವ್ಯಾನ್ ವೊಂದು ಟ್ರಾಕ್ಟರ್-ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಇತರ ಆರು ಮಂದಿ ಗಾಯಗೊಂಡಿದ್ದಾರೆ. ಕಾರ್ಮಿಕರು ಮೌ ನಲ್ಲಿನ ಇಟ್ಟಿಗೆಗೂಡು ಕಾರ್ಖಾನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರಾಜೇಶ್ (22), ರಂಬುಜ್ (25) ಮತ್ತು ಲಕ್ಷ್ಮಿಶಂಕರ್ (23) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 