ತಹಶೀಲ್ದಾರ್ ಮಂಜುನಾಥ ನಾಯಕ ಅಧಿಕಾರ ಸ್ವೀಕಾರ

Tahsildar Manjunath Nayak assumes office

ಕಂಪಿ  12;  ಸ್ಥಳೀಯ ತಹಶೀಲ್ದಾರ್ ಕಛೇರಿಯಲ್ಲಿ ನೂತನ ತಹಶೀಲ್ದಾರ್ ಆಗಿ ಮಂಜುನಾಥ ನಾಯಕ ಇವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಒಂದು ವರ್ಷಕ್ಕೂ ಹೆಚ್ಚು ಅವಧಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿವರಾಜ ಶಿವಪುರ ಇವರ ಜಾಗಕ್ಕೆ ನೂತನ ತಹಶೀಲ್ದಾರ್ ಆಗಿ ಮಂಜುನಾಥ ಅಧಿಕಾರವಹಿಸಿಕೊಂಡರು.

ಶಿವರಾಜ ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ಮಂಜುನಾಥ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಮಂಜುನಾಥ ನಾಯಕ ಮಾತನಾಡಿ, ಈ ಹಿಂದೆ ಬಳ್ಳಾರಿಯಲ್ಲಿ ಗ್ರೇಡ್‌-2 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುವೆ. ಕೆಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ. ಇಲ್ಲಿನ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಚೇರಿಯ ಸಂಪೂರ್ಣ ಮಾಹಿತಿ ಪಡೆದ ಬಳಿಕ ಆಡಳಿತಕ್ಕೆ ಚುರುಕು ನೀಡಲಾಗುತ್ತದೆ. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು’ ಎಂದು ತಿಳಿಸಿದರು. ಇಲ್ಲಿನ ಸಿಬ್ಬಂದಿ ವರ್ಗದವರು ನೂತನ ತಹಶೀಲ್ದಾರರಿಗೆ ಮಾಲಾರೆ​‍್ಣ ಮಾಡುವ ಮೂಲಕ ಸ್ವಾಗತಿಸಿದರು.