ಗ್ರಾಮೀಣ ಪ್ರದೇಶಗಳಲ್ಲಿ ಸಮರ​‍್ಕ ನೀರು ನಿರ್ವಹಣೆಗೆ ಕ್ರಮವಹಿಸಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ

Take action for strategic water management in rural areas G.P. Chief Executive Officer Rahul Shind

ಗ್ರಾಮೀಣ ಪ್ರದೇಶಗಳಲ್ಲಿ ಸಮರ​‍್ಕ ನೀರು ನಿರ್ವಹಣೆಗೆ ಕ್ರಮವಹಿಸಿ 

 ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ  

                                                   

ಬೆಳಗಾವಿ 16: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಸಮರ​‍್ಕವಾಗಿ ನೀರಿನ ನಿರ್ವಹಣೆಯಾಗುವಂತೆ ನಿಗಾವಹಿಸಲು  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ತಿಳಿಸಿದರು.  

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ಏ.16ರಂದು  ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಗ್ರಾಮ ಪಂಚಾಯತಗಳಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ನಿಯಮಿತವಾಗಿ ಜರುಗಿಸಬೇಕು. ಸಮರ​‍್ಕ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಚತೆ ಗ್ರಾಮ ಪಂಚಾಯತಗಳ ಮೂಲ ಕರ್ತವ್ಯವಾಗಿದೆ. ಗ್ರಾಮ ಪಂಚಾಯತಗಳ ಚುನಾಯಿತ ಸದಸ್ಯರು ವಿಶೇಷ ಮುತುವರ್ಜಿ ವಹಿಸಿ ಗ್ರಾಮಗಳ ಸ್ವಚ್ಚತೆಗೆ ಗಮನ ಹರಿಸಲು ತಿಳಿಸಿದರು.  

ಗ್ರಾಮಗಳ ನೈರ್ಮಲ್ಯ ಕಾಪಾಡುವದು ಗ್ರಾಮ ಪಂಚಾಯತಗಳ ಕರ್ತವ್ಯವಾಗಿದ್ದು ಈ ಕುರಿತು ಗ್ರಾಮಗಳಲ್ಲಿ ಜಾಗೃತಿ ಮೂಡಿಸುವದರ ಮೂಲಕ  ನೈರ್ಮಲ್ಯಕ್ಕೆ ಹೆಚ್ವಿನ ಆದ್ಯತೇ ನೀಡಬೇಕು.ಅಲ್ಲದೇ  ಗ್ರಾಮಗಳಲ್ಲಿ ಸಂಗ್ರಹವಾಗುವ  ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ  ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ಗ್ರಾಮಗಳಲ್ಲಿ ಸರಬರಾಜು ಆಗುವ ಕುಡಿಯುವ ನೀರಿನ ಪರೀಕ್ಷೆ ನಿಯಮಿತವಾಗಿ ಜರುಗಿಸಬೇಕು. ಈ ಬಾರಿ ಮಳೆ ಹೆಚ್ಚಾಗುವ ಸಂಭವವಿದ್ದು ಎಲ್ಲ ಗ್ರಾಮ ಪಂಚಾಯತಗಳ ಚರಂಡಿಗಳ ಸ್ವಚ್ಛಗೊಳಿಸಲು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಗಮನಹರಿಸಬೇಕು. ಗ್ರಾಮ ಪಂಚಾಯತಗಳಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣಾ ನೀತಿಯನ್ನು ಅಳವಡಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಮುಂದಾಗುವಂತೆ ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ತಿಳಿಸಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೆಶಕರಾದ ರವಿ ಬಂಗಾರ​‍್ಪನವರ, ಗ್ರಾ. ಕು.ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಾಂಡುರಂಗ ರಾವ್,ಶಶಿಕಾಂತ ನಾಯಕ, ಮಾರಿಹಾಳ ಗ್ರಾಮ ಪಂಚಾಯತ ಅಧ್ಯಕ್ಷರಾದ ಆಸೀಫ್ ಮುಲ್ಲಾ, ಬಸಾಪುರ ಗ್ರಾಮ ಪಂಚಾಯತ ಅಧ್ಯಕ್ಷರಾದ ಭೀಮಶಿ ಕಲಮನಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.