ಬಳ್ಳಾರಿ

ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಪಿ.ಎಸ್‌.ಮಂಜುನಾಥ

ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಪಿ.ಎಸ್‌.ಮಂಜುನಾಥ

ಬಳ್ಳಾರಿ 03: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಾರ್ಮಿಕ ಇಲಾಖೆಯಿಂದ ನೊಂದಣಿ ಮತ್ತು ನವೀಕರಣ ಗುರುತಿನ ಚೀಟಿ ಮಾಡಿಸಿಕೊಂಡು ಸರ್ಕಾರದಿಂದ ಕಾರ್ಮಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್‌. ಮಂಜುನಾಥ ಅವರು ಹೇಳಿದರು. 


ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ಅದಾಲತ್ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಆಟೋ ಪ್ರಚಾರ ಜಾಥಾಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.  

ಸರ್ಕಾರದಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್‌ಗಳನ್ನು ವಿತರಿಸುವ ಮೂಲಕ ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಾಯಿತು ಎಂದರು.  


ಕಾರ್ಮಿಕ ಇಲಾಖೆಯ ವತಿಯಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಅನುಕೂಲವಾಗಲು ಜಿಲ್ಲೆಯ ಎಲ್ಲಾ ಕಾರ್ಮಿಕರು ಕಾರ್ಮಿಕರ ಕಾರ್ಡ್‌ಗಳನ್ನು ಪಡೆಯಿರಿ ಎಂದರು. 

ಈ ಸಂದರ್ಭದಲ್ಲಿ ಉಪವಿಭಾಗ-1 ರ ಜಿಲ್ಲಾ ಕಾರ್ಮಿಕ ಆಧಿಕಾರಿ ಕಮಲ್ ಅಲ್ತಾಪ್ ಅಹಮ್ಮದ್, ಉಪವಿಭಾಗ-2ರ ಜಿಲ್ಲಾ ಕಾರ್ಮಿಕ ಆಧಿಕಾರಿ ಮಾರಿಕಾಂಬ, ಕಾರ್ಮಿಕ ಇಲಾಖೆ ವೃತ್ತ-2ರ ಕಾರ್ಮಿಕ ನೀರೀಕ್ಷಕರ ರವಿದಾಸ್, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಹಾಗೂ  ಕಾರ್ಮಿಕ ಇಲಾಖೆ ಸಿಬ್ಬಂದಿ ಮತ್ತು ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ