ಸ್ವಚ್ಛತೆ, ಆರೋಗ್ಯ ಬಗ್ಗೆ ಕಾಳಜಿ ವಹಿಸಿ: ಉಪನ್ಯಾಸಕ ಎಚ್.ಎಸ್. ತಾಸಿನ್
ಗದಗ : ಸಾರ್ವಜನಿಕರು ಸ್ವಚ್ಛತೆ, ಆರೋಗ್ಯ, ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಸರಕಾರದ ಯೋಜನೆಗಳನ್ನು ಪ್ರತೊಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು. ಹಾಗೂ ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳಹಿಸುವುದರ ಜೊತೆಗೆ ಶಿಕ್ಷಣದ ಕಡೆ ಗಮನ ಗಮನ ಹರಿಸಬೇಕಿದೆ ಎಂದು ಡೋಣಿಯ ಸರಕಾರ ಪಬ್ಲಿಕ್ ಕಾಲೇಜಿನ ಉಪನ್ಯಾಸಕ ಎಚ್.ಎಸ್. ತಾಸಿನ್ ನುಡಿದರು.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕನರ್ಾಟಕ ಪಬ್ಲಿಕ್ ಕಾಲೇಜು ಆವರಣದಲ್ಲಿ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಗ್ರಾಮ ಸಂಪರ್ಕ ಯೋಜನೆಯಡಿಯಲ್ಲಿ ಜಾನಪದ ಮತ್ತು ನಾಟಕದ ಮೂಲಕ ಸರಕಾರದ ಯೋಜನೆಯ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕ್ಷೇತ್ರ ಪ್ರಚಾರ ಕಾರ್ಯಕ್ರಮ ತಮಟೆ ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸಿದ್ಧಲಿಂಗೇಶ್ವರ ಜಾನಪದ ಕಲಾತಂಡ ಅಡವಿಸೋಮಾಪೂರ ಹಾಗೂ ಗುರು ಶಿಷ್ಯ ಪರಂಪರೆ ಜಾನಪದ ಕಲಾತಂಡ ಲಕ್ಕುಂಡಿ ಜಾನಪದ ಕಲಾ ತಂಡದವರು ಗ್ರಾಮದ ಸ್ವಚ್ಚತೆ ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳಾದ ಕಿಸಾನ್ ಸಮ್ಮಾನ್, ಸಹಾಯಧನ, ನೇಕಾರರು, ಮೀನುಗಾರರ ಸಾಲಮನ್ನಾ, ರೈತರ ಸಾಲಮನ್ನಾ, ಸಮ್ಮಾನ್ ಯೋಜನೆ, ಆಯುಷ ಸಮ್ಮಾನ್ ಕಾರ್ಡ್ ಯೋಜನೆ, ವಿದ್ಯಾಶ್ರೀ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ, ಭಾಗ್ಯಶ್ರಿ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳ ಕುರಿತು ಆಯಾ ಇಲಾಖೆಯಲ್ಲಿ ಮಾಹಿತಿ ಪಡೆದು ರೈತರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಜಾನಪದ ಗೀತೆ ಹಾಗೂ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಸಹ ಶಿಕ್ಷಕರಾದ ಡಿ.ಆರ್. ಹಾಳಕೇರಿ, ಎಸ್.ಎನ್.ಸೋಮಣ್ಣವರ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 