ಗದಗ

ಕುಡಿಯುವ ನೀರು, ಮೇವು ಕೊರತೆಯಾಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ

ಕುಡಿಯುವ ನೀರು, ಮೇವು ಕೊರತೆಯಾಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ


ಗದಗ, ಅ.8: ಜಿಲ್ಲೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಅಧಿಕಾರಿಗಳಿಗೆ ಸೂಚಿಸಿದರು.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ತಾಲೂಕುವಾರು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಸಲ್ಲಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಲಾಶಯಗಳಿಂದ ನೀರು ಬಿಡುವ ಮುನ್ನ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.  

ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸಿ ಪ್ರತಿಯೊಂದು ಮನೆಗೂ ನಳದ ಮೂಲಕ ನೀರು ತಲುಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆರೆಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಹಾಗೂ ಅಂತರ್ಜಲ ಮಟ್ಟದ ವರದಿಯನ್ನು ಪರೀಶೀಲಿಸಿದ ಜಿಲ್ಲಾಧಿಕಾರಿಗಳು, ಲಭ್ಯವಿರುವ ನೀರನ್ನು ಸಮರ​‍್ಕವಾಗಿ ಬಳಸಿಕೊಳ್ಳಬೇಕು ಮತ್ತು ಕೆರೆಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಬೇಕು ಎಂದರು.  


ಸುದ್ದಿ ಓದಿ