ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಮಹಮ್ಮದ್ ಹಾರೀಸ್ ಸುಮೇರ್
Take precautionary measures to control the epidemic: Mohammed Haris Sumer
ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬಳ್ಳಾರಿ, ಆ. 2: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ನಡೆಸಿ ಅವರು ಮಾತನಾಡಿದರು.
ತಾಯಿ-ಮಗು ಆರೋಗ್ಯಕ್ಕೆ ಒತ್ತು
ಗರ್ಭಿಣಿಯರು ಕಡ್ಡಾಯವಾಗಿ 12 ವಾರಗಳೊಳಗೆ ಗರ್ಭ ನೋಂದಣಿ ಮಾಡಿಸಿಕೊಳ್ಳಬೇಕು. ಇದರಿಂದ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುವುದರಿಂದ ತಾಯಿ ಮತ್ತು ಶಿಶು ಮರಣ ಪ್ರಮಾಣ ತಡೆಗಟ್ಟಬಹುದು ಎಂದು ಹೇಳಿದರು. ಗರ್ಭಿಣಿಯರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶೇ.100 ಲಸಿಕಾ ಗುರಿ ಸಾಧಿಸಿ
ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ ನವಜಾತ ಶಿಶುಗಳಿಗೆ ನೀಡಬೇಕಿರುವ ಎಲ್ಲ ಲಸಿಕೆಗಳನ್ನು ಕಡ್ಡಾಯವಾಗಿ ನೀಡಿ ಶೇ.100ರಷ್ಟು ಗುರಿ ಸಾಧಿಸುವಂತೆ ತಿಳಿಸಿದರು.
ವಸತಿ ನಿಲಯಗಳ ಆರೋಗ್ಯ ತಪಾಸಣೆ
ಆರ್ಬಿಎಸ್ಕೆ ವೈದ್ಯಕೀಯ ತಂಡಗಳು ಜಿಲ್ಲೆಯ ಸುಮಾರು 80 ವಸತಿ ನಿಲಯಗಳಿಗೆ ಪ್ರತಿ ತಿಂಗಳು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯ ಶಿಕ್ಷಣ ನೀಡಬೇಕು ಎಂದು ನಿರ್ದೇಶನ ನೀಡಿದರು.
ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯ
ಗ್ರಾಮ ಮತ್ತು ನಗರ ಪ್ರದೇಶಗಳ ಕುಡಿಯುವ ನೀರಿನ ಮೂಲಗಳನ್ನು ನಿಯಮಿತವಾಗಿ ಪರೀಕ್ಷಿಸಬೇಕು. ಗ್ರಾಮ ಪಂಚಾಯಿತಿಗಳೊಂದಿಗೆ ಸಮನ್ವಯ ಸಾಧಿಸಿ ನೀರಿನ ಗುಣಮಟ್ಟದ ವರದಿಗಳನ್ನು ಪರೀಶೀಲಿಸುವಂತೆ ಸೂಚಿಸಿದರು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ
ಸೊಳ್ಳೆಗಳಿಂದ ಹರಡುವ ರೋಗಗಳು, ನಾಯಿ ಕಡಿತ, ಹಾವು ಕಡಿತ, ಬಾಲ್ಯವಿವಾಹ ತಡೆ ಸೇರಿದಂತೆ ವಿವಿಧ ಆರೋಗ್ಯ ವಿಷಯಗಳ ಕುರಿತು ಶಾಲೆ, ಕಾಲೇಜು ಹಾಗೂ ಸಮುದಾಯ ಮಟ್ಟದಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಕ್ಷಯರೋಗ ಪತ್ತೆಗೆ ಆದ್ಯತೆ
ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಯನ್ನು ಮತ್ತಷ್ಟು ಚುರುಕುಗೊಳಿಸಿ, ರೋಗಿಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಡಿ. ಮಳಗಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಆರ್. ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ವೀರೇಂದ್ರ ಕುಮಾರ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರಿ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 