ಕೊರೋನ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ
ಕೊರೋನ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ
ಕಾರವಾರ ಆ 2 ಸಂಭನೀಯ ಕೊರೊನಾ ಮೂರನೆ ಅಲೆ ರಾಜ್ಯವನ್ನು ಕಾಡದಂತೆ ಸೂಕ್ತ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ.
ಕಾರವಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಹೆಚ್ಚು ಜನ ಬರುತ್ತಾರೆ, ರಾಜ್ಯದ ಗಡಿಗಳಲ್ಲಿ ಅವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಎರಡು ಡೋಸ್ ಲಸಿಕೆ ಪಡೆಯದವರನ್ನು ಗಡಿ ಒಳಗೆ ಬಿಡಬಾರದು ಹಾಗೂ ಪರೀಕ್ಷೆ ನಡೆಸಿ ನೆಗೆಟಿವ್ ಬಂದವರನ್ನು ಮಾತ್ರ ಒಳಗೆ ಬಿಡಬೇಕು ಎಂದರು.
ಈಗಾಗಲೇ ನಾವು ಸಾಕಷ್ಟುಸಂಕಷ್ಟ ಅನುಭವಿಸಿದ್ದೇವೆ. ಸೂಕ್ತ ಆಸ್ಪತ್ರೆ, ಹಾಸಿಗೆಗಳು, ವೆಂಟಿಲೇಟರ್, ಆಕ್ಸಿಜನ್ ಇಲ್ಲದೆ ಸಾವಿರಾರು ಜನ ಸಾವಿಗೀಡಾಗಿದ್ದಾರೆ, ಇದು ಮತ್ತೆ ಮರುಕಳಿಸದಂತೆ ತಡೆಯಬೇಕು. ಇದನ್ನು ಬಿಟ್ಟು ಮುಖ್ಯಮಂತ್ರಿಗಳು ಮಂತ್ರಿಮಂಡಲ ರಚನೆಗೆ ಓಡಾಡುತ್ತಿದ್ದಾರೆ. ಒಮ್ಮೆ ದೆಹಲಿಗೆ ಹೋಗಲಿ, ಪದೇ ಪದೇ ಹೋಗುವ ಅಗತ್ಯವೇನಿದೆ? ಬಿಜೆಪಿ ಹೈಕಮಾಂಡ್ ಕೂಡ ರಾಜ್ಯದ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ಠಿಕಾಣಿ ಹೂಡಿ, ಮಂತ್ರಿ ಪದವಿಗಾಗಿ ಲಾಬಿ ಮಾಡುತ್ತಿದ್ದಾರೆ. ಒಬ್ಬ ಶಾಸಕನು ತನ್ನ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಿಲ್ಲ. ಇವರಿಗೆ ಜನರ ಜೀವಕ್ಕಿಂತ ಮಂತ್ರಿಯಾಗುವುದೇ ಬಹಳ ಮುಖ್ಯವಾಗಿದೆ ಎಂದು ಅವರು ದೂರಿದರು.
ಬಸವರಾಜ ಬೊಮ್ಮಾಯಿಯವರು ಈಗಷ್ಟೇ ಮುಖ್ಯಮಂತ್ರಿಗಳಾಗಿದ್ದಾರೆ. ಅವರ ಬಗ್ಗೆ ಟೀಕೆ ಮಾಡುವುದಿಲ್ಲ. ಆದರೆ ರಾಜ್ಯದ ಸಮಸ್ಯೆಗಳ ಬಗ್ಗೆ ಗಮನ ಕೊಡಬೇಕು. ಲಾಕ್ ಡೌನ್ ಹೇರುವಂತ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಕಳೆದೆರಡು ದಿನಗಳಿಂದ ಸೋಂಕಿನ ಪ್ರಮಾಣ ಎರಡು ಸಾವಿರ ಸಮೀಪದಲ್ಲಿದೆ. ಇದು ಎರಡು ಸಾವಿರದ ಗಡಿ ದಾಟಿದರೆ ಮೂರನೆ ಅಲೆ ಶುರುವಾಗಿದೆ ಎಂದರ್ಥ.
ಬಿಜೆಪಿ,ಆ ಪಕ್ಷದ ನಾಯಕರು ಮಹಾನ್ ಸುಸಂಸ್ಕೃತರು ಎಂದು ಹೇಳಿಕೊಳ್ಳುತ್ತಾರೆ. ನಮ್ಮಂತ ಸಂಸ್ಕಾರ, ನಡತೆ ಯಾರಿಗೂ ಇಲ್ಲ ಎನ್ನುವಂತೆ ವರ್ತಿಸುತ್ತಾರೆ. ವಾಸ್ತವದಲ್ಲಿ ಇವರಷ್ಟು ಭಂಡರು ಯಾರೂ ಇಲ್ ಎಂದರು.
ಜೆಡಿಎಸ್ ಈಗ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ, ಜಾತ್ಯಾತೀತ ಸಿದ್ದಾಂತ ಬಿಟ್ಟು ತುಂಬಾ ಸಮಯವಾಗಿದೆ. ಹಿಂದೆ ನಾವಿದ್ದ ಕಾಲದ ಜೆಡಿಎಸ್ ಪಕ್ಷ ಈಗಿಲ್ಲ ಎಂದರು ಬಿಜೆಪಿ ಭ್ರಷ್ಟರ ಪಕ್ಷ, ಅವರ ಸರ್ಕಾರ ಭ್ರಷ್ಟ ಸರ್ಕಾರ. ಯಡಿಯೂರಪ್ಪ ಭ್ರಷ್ಟರಲ್ಲದೆ ಹೋಗಿದ್ದರೆ ಮುಖ್ಯಮಂತ್ರಿ ಹುದ್ದೆಯಿಂದ ಏಕೆ ಕೆಳಗಿಳಿಸುತ್ತಿದ್ದರೆ? ಕೇವಲ ವಯಸ್ಸಿನ ಕಾರಣವಾಗಿದ್ದರೆ 75 ವರ್ಷ ದಾಟಿ ಎರಡು ವರ್ಷ ಕಳೆದಿಲ್ಲವೆ? ಇಷ್ಟು ಕಾಲ ಏಕೆ ಮೌನವಾಗಿದ್ದರು ಎಂದು ಎಂದು ಪ್ರಶ್ನಿಸಿದರು.
ಬಿಜೆಪಿ ಭ್ರಷ್ಟರ ಪಕ್ಷ, ಅವರ ಸರ್ಕಾರ ಭ್ರಷ್ಟ ಸರ್ಕಾರ. ಯಡಿಯೂರಪ್ಪ ಭ್ರಷ್ಟರಲ್ಲದೆ ಹೋಗಿದ್ದರೆ ಮುಖ್ಯಮಂತ್ರಿ ಹುದ್ದೆಯಿಂದ ಏಕೆ ಕೆಳಗಿಳಿಸುತ್ತಿದ್ದರೆ? ಕೇವಲ ವಯಸ್ಸಿನ ಕಾರಣವಾಗಿದ್ದರೆ 75 ವರ್ಷ ದಾಟಿ ಎರಡು ವರ್ಷ ಕಳೆದಿಲ್ಲವೆ? ಇಷ್ಟು ಕಾಲ ಏಕೆ ಮೌನವಾಗಿದ್ದರೂ ಎಂದೂ ಸಿದ್ದರಾಮಯ್ಯ ಪ್ರಶ್ನಿಸಿದರು.