ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಕ್ರಮವಹಿಸಿ : ಹಿ ಡಾ. ಸುರೇಶ್ ಬಿ. ಇಟ್ನಾಳ್
Take steps to conduct SSLC annual examination transparently: Dr. Suresh B. Itnal
ಕೊಪ್ಪಳ 09: ಮಾರ್ಚ್ ್ಘ ಏಪ್ರಿಲ್-2026ರಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕಯನ್ನು ಜಿಲ್ಲೆಯಲ್ಲಿ ಶಿಸ್ತಿನಿಂದ, ಪಾರದರ್ಶಕವಾಗಿ ಹಾಗೂ ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರೀಕ್ಷಾ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯಲ್ಲಿ 2026ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ ಸಭಾಂಗಣದಲ್ಲಿ ಮಾರ್ಚ್/ಏಪ್ರಿಲ್-2026ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಇದೇ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ಕೊಡದೇ ಪರೀಕ್ಷಾ ನಿಯಮಗಳಂತೆ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ವಯ ನಡೆಸಬೇಕು. ಕೊಪ್ಪಳ ಜಿಲ್ಲೆಯಲ್ಲಿ 2026ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಪರೀಕ್ಷೆ ಮುಖ್ಯ ಅಧೀಕ್ಷಕರು ಮಾರ್ಗಸೂಚಿಗಳನ್ನು ಓದಿಕೊಂಡು ಅದರಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಅಗತ್ಯ ಕುಡಿಯುವ ನೀರು ಮತ್ತು ಶೌಚಾಲಯಗಳ ವ್ಯವಸ್ಥೆಯನ್ನು ಸಹ ಕಲ್ಪಿಸಬೇಕು. ಪರೀಕ್ಷೆ ಬರೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲ ಮಹಡಿಯಲ್ಲಿ ಸೂಕ್ತ ಆಸನದ ವ್ಯವಸ್ಥೆ ಮಾಡಬೇಕು. ಅಂಧ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮತ್ತು ಬರವಣಿಗೆ ಸಹಾಯಕರ ಒಪ್ಪಿಗೆ ಪತ್ರವನ್ನು ಪರೀಶೀಲಿಸಿ ಅಗತ್ಯ ಕ್ರಮ ವಹಿಸಬೇಕು ಎಂದರು.
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಬರೆಯಲು ಮೂರು ಬಾರಿ ಅವಕಾಶವಿದ್ದು, ಮೊದಲ ಪರೀಕ್ಷೆಯಲ್ಲಿ ಮಕ್ಕಳು ಭಯ ಪಡುವ ಅವಶ್ಯಕತೆಯಿಲ್ಲ. ಇದರ ಬದಲಿ ಇನ್ನೂ ಎರಡು ಬಾರಿ ಅವಕಾಶವಿದೆ ಎಂದು ಮಕ್ಕಳಿಗೆ ತಿಳಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಮತ್ತು ಪರೀಕ್ಷಾ ಅವಧಿಯಲ್ಲಿ ಕೊಠಡಿ ಮೇಲ್ವಿಚಾರಕರು ಮೊಬೈಲ್ ಬಳಕೆ ಮಾಡುವುದನ್ನು ಸಹ ನಿಷೇಧಿಸಲಾಗಿದ್ದು, ಈ ಬಗ್ಗೆ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್ ಅವರು ಮಾತನಾಡಿ, ಈ ಬಾರಿಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗೆ 23,001 ಹೊಸ ವಿದ್ಯಾರ್ಥಿಗಳು ಸೇರಿ ಜಿಲ್ಲೆಯ ಒಟ್ಟು 25,556 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಜಿಲ್ಲೆಯ ಗಂಗಾವತಿ ತಾಲ್ಲೂಕಿನ 23, ಕೊಪ್ಪಳ ತಾಲ್ಲೂಕಿನ 21, ಕುಷ್ಟಗಿ ತಾಲ್ಲೂಕಿನ 15 ಹಾಗೂ ಯಲಬುರ್ಗಾ ತಾಲ್ಲೂಕಿನ 14 ಸೇರಿದಂತೆ ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರನ್ನು ನೇಮಿಸಲಾಗಿದೆ ಹಾಗೂ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ವಿಭಾಗಗಳ ಪ್ರಶ್ನೆ ಪತ್ರಿಕೆ ಪಾಲಕರಾಗಿರುತ್ತಾರೆ. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ವೀಕ್ಷಕರಿಗೆ ಈಗಾಗಲೇ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆಗಳ ಸುರಕ್ಷತೆ, ವಿದ್ಯಾರ್ಥಿಗಳ ಕುಳಿತುಕೊಳ್ಳುವ ವ್ಯವಸ್ಥೆ, ಪರೀಕ್ಷಾ ಸಾಮಗ್ರಿಗಳ ಲಭ್ಯತೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಮುನಿರಾಬಾದ್‌ನಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆ ಡಯೆಟ್ ಪ್ರಾಶುಂಪಾಲರಾದ ಅನಂತಕುಮಾರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯ ಪರೀವೀಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ತಾಲ್ಲೂಕು ನೋಡಲ್ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 