ಪರೀಕ್ಷೆ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
Take steps to conduct the examination systematically and neatly: Deputy Commissioner C.N. Sridhar
ಗದಗ 10 : ಜಿಲ್ಲೆಯಲ್ಲಿ ಮಾರ್ಚ 18 ರಿಂದ ಏಪ್ರಿಲ್ 2 ರವರೆಗೆ ಜರುಗುವ ಎಸ್ಎಸ್ಎಲ್ಸಿ ಪರೀಕ್ಷೆ-1 ಯನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಎಸ್ಎಸ್ಎಲ್ಸಿ ಪರೀಕ್ಷೆ-1 ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನದ ವ್ಯವಸ್ಥೆ ಇರುವಂತೆ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಒಟ್ಟು 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ಜರುಗಿಸಬೇಕು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಪರೀಕ್ಷೆಗಳು ಶಾಂತಿಯುತವಾಗಿ, ಪಾರದರ್ಶಕವಾಗಿ ನಡೆಯುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ ಮಾತನಾಡಿ ಎಸ್ಎಸ್ಎಲ್ಸಿ-1 ಪರೀಕ್ಷೆಯು ಮಾರ್ಚ 18 ರಿಂದ ಏಪ್ರಿಲ್ 2 ರವರೆಗೆ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. ಒಟ್ಟು 17146 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ ಬಂದೋಬಸ್ತ, ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರಲು ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಮಹಾಂತೇಶ ಸಜ್ಜನ, ಡಯಟ್ ಪ್ರಾಚಾರ್ಯರಾದ ಜೆ ಎಂ ಮುಂದಿನಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಜರಾಗಿದ್ದರು.
ಎಸ್ಎಸ್ಎಲ್ಸಿ ಪರೀಕ್ಷೆ- 1 ವೇಳಾಪಟ್ಟಿ : ಮಾರ್ಚ 18 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ ಪ್ರಥಮ ಭಾಷೆ ( ಕನ್ನಡ, ತೆಲಗು,ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್ , ಇಂಗ್ಲೀಷ್ ಎನ್ ಸಿಇಆರ್ಟಿ, ಸಂಸ್ಕೃತ); ಮಾರ್ಚ 23 ರಂದು ಕೋರ್ ಸಬ್ಜೆಕ್ಟ್ ಹಿ ವಿಜ್ಞಾನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15, ರಾಜ್ಯಶಾಸ್ತ್ರ - ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15, ಹಿಂದೂಸ್ಥಾನಿ ಸಂಗೀತ / ಕರ್ನಾಟಕ ಸಂಗೀತ ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5.15 ಗಂಟೆಯವರೆಗೆ; ಮಾರ್ಚ 25 ರಂದು ದ್ವಿತೀಯ ಭಾಷೆ - ಇಂಗ್ಲಿಷ್ , ಕನ್ನಡ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ; ಮಾರ್ಚ 28 ರಂದು ಕೋರ್ ಸಬ್ಜೆಕ್ಟ್ ಹಿ ಗಣಿತ, ಸಮಾಜ ಶಾಸ್ತ್ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ಗಂಟೆಯವರೆಗೆ; ಮಾರ್ಚ 30 ರಂದು ತೃತೀಯ ಭಾಷೆ ( ಹಿಂದಿ ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್ , ಅರೇಬಿಕ್ , ಉರ್ದು, ಸಂಸ್ಕೃತ , ಕೊಂಕಣಿ , ತುಳು, ಮರಾಠಿ) ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ/ ಎನ್.ಎಸ್.ಕ್ಯೂ ಎಫ್ ವಿಷಯಗಳು : ಮಾಹಿತಿ ತಂತ್ರಜ್ಞಾನ, ರಿಟೇಲ್ , ಅಟೋಮೊಬೈಲ್ , ಬ್ಯೂಟಿ ಆಂಡ್ ವೆಲ್ನೆಸ್ , ಅಪರೆಲ್ ಮೇಡ್ ಆಪ್ಸ್ ್ಘ ಹೋಮ್ ಫರ್ನಿಷಿಂಗ್ , ಎಲೆಕ್ಟ್ರಾನಿಕ್ಸ್ ್ಘ ಹಾರ್ಡವೇರ್ - ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.15 ಗಂಟೆಯವರೆಗೆ; ಏಪ್ರಿಲ್ 1 ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜನೀಯರಿಂಗ್ ಹಿ ಋ, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜನೀಯರಿಂಗ್ - ಋ, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜನೀಯರಿಂಗ್ - ಋ, ಪ್ರೋಗ್ರಾಮಿಂಗ್ ಇನ್, ಅರ್ಥಶಾಸ್ತ್ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ ; ಏಪ್ರಿಲ್ 2 ರಂದು ಕೋರ್ ಸಬ್ಜೆಕ್ಟ್ - ಸಮಾಜ ವಿಜ್ಞಾನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗ ಜರುಗಲಿವೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 